ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅತ್ಯಧಿಕ ಅಂತರದ ಗೆಲುವು ಖಚಿತ: ದೀಪಕ್‌ಕುಮಾರ್ ಶೆಟ್ಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ರಾಜ್ಯ ಸರಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಬೈಂದೂರು ಶಾಸಕರು ಹಾಗೂ ಸಂಸದರು ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ವರದಿ ಜಾರಿಗೊಳಿಸುವ ಸಂಬಂಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರದಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದರ ಒಳಿತು ಕೆಡಕುಗಳನ್ನು ತಿಳಿದುಕೊಂಡು ಯಾರಿಗೂ ತೊಂದರೆಯಾಗದಂತೆ ವರದಿ ಅನುಷ್ಠಾನಗೊಳಿಸಬೇಕು. ಹೀಗಾಗಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸಲು ಮುಂದಾಗಬಾರದು ಎಂದು ಸರಕಾರವನ್ನು ಆಗ್ರಹಿಸಲಾಗುವುದು ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಹೇಳಿದರು.

Call us

Click Here

ಹೆಮ್ಮಾಡಿಯಲ್ಲಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೈಂದೂರು ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕರು ಹಾಗೂ ಸಂಸದರ ಗಮನಕ್ಕೆ ತರಲಾಗಿದೆ. ಈ ಸಂಬಂಧ ಶಾಸಕ ಸುಕುಮಾರ್ ಶೆಟ್ಟಿ ಅವರು ಡಿ.೬ರಂದು ಬೈಂದೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಿದ್ದಾರೆ. ಸರಕಾರಿ ಆಸ್ಪತ್ರೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಹಾಗೂ ವೈದ್ಯಾಧಿಕಾರಿಗಳನ್ನು ನೇಮಿಸುವಂತೆ ಶಾಸಕರು ಸರಕಾರ ಹಾಗೂ ಸಚಿವರನ್ನು ಆಗ್ರಹಿಸಿದ್ದು, ಆಸ್ಪತ್ರೆಯಲ್ಲಿ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.

ಡಿ.೧೦ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಎಲ್ಲೆಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಅತ್ಯಧಿಕ ಮತಗಳ ಅಂತರದಿಂದ ಅವರು ಗೆಲುವು ಸಾಧಿಸಲಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೯ ಗ್ರಾಪಂ.ಗಳಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಸುಮಾರು ೩೪೨ ಬಿಜೆಪಿ ಬೆಂಬಲಿತ ಗ್ರಾಪಂ. ಸದಸ್ಯರ ಹಾಗೂ ಇನ್ನಿತರ ಗ್ರಾಪಂ ಸದಸ್ಯರ ಮತಗಳನ್ನು ಶ್ರೀನಿವಾಸ ಪೂಜಾರಿ ಅವರಿಗೆ ಹಾಕಿಸಿ ಕ್ಷೇತ್ರದಲ್ಲಿ ಬಿಜೆಪಿ ಭದ್ರ ಬುನಾದಿಯನ್ನು ಹಾಕಲಿದೆ ಎಂದು ಅವರು ಹೇಳಿದರು.

ಸಂಸದ ಬಿ.ವೈ.ರಾಘವೇಂದ್ರ ಮತ್ತು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ನೇತೃತ್ವದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ನಡೆದಿದೆ. ಹೀಗಾಗಿ ಹೆಚ್ಚಿನ ಮತಗಳು ಈ ಬಾರಿ ಬಿಜೆಪಿ ಅಭ್ಯರ್ಥಿಗೆ ಬರಲಿದೆ. ಈ ಬಗ್ಗೆ ಈಗಾಗಲೇ ಪ್ರತಿಯೊಂದು ಗ್ರಾಪಂ.ಗೆ ಉಸ್ತುವಾರಿಗಳನ್ನು ನೇಮಕ ಮಾಡಿದ್ದು, ಅವರು ಪ್ರತಿಯೊಬ್ಬ ಗ್ರಾಪಂ ಸದಸ್ಯರನ್ನು ಸಂಪರ್ಕಿಸಿ ಅವರ ಮತಗಳನ್ನು ಬಿಜೆಪಿ ಅಭ್ಯರ್ಥಿಗೆ ಹಾಕಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದಾರೆ. ಬಿಜೆಪಿ ಸಂಘಟನಾತ್ಮಕವಾಗಿ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ಕೋಟ ಶ್ರೀನಿವಾಸ ಪೂಜಾರಿ ಗೆಲುವಿಗೆ ಶ್ರಮಿಸಲಿದೆ ಎಂದರು.

ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply