Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ: ಸಂಸದ ಬಿ. ವೈ. ರಾಘವೇಂದ್ರ
    ಊರ್ಮನೆ ಸಮಾಚಾರ

    ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ: ಸಂಸದ ಬಿ. ವೈ. ರಾಘವೇಂದ್ರ

    Updated:06/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸತತ ಮೂರು ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಸಚಿವರಾಗಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಭಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಡಿ.10ರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ ಗೆಲ್ಲಿಸಲು ಚುನಾಯಿತ ಪ್ರತಿನಿಧಿಗಳು ಶ್ರಮವಹಿಸಬೇಕಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

    Click Here

    Call us

    Click Here

    ಸದನದಲ್ಲಿ ದೀನ ದಲಿತರ, ಬಡವರ, ಹಿಂದುಳಿದ ವರ್ಗದವರ ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಸರ್ಮಥವಾಗಿ ಕಾರ್ಯನಿರ್ವಹಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ಬಗ್ಗೆ ಅಪಾರ ಅನುಭವವುಳ್ಳವರು. ಹಿಂದುಳಿದ ವರ್ಗದ ನಾಯಕರಾಗಿ ದಕ್ಷ, ಪ್ರಾಮಾಣಿಕ, ಸರಳ ಸಜ್ಜನಿಕೆಯ ಮೂಲಕ ಹೆಸರಾದವರು. ಮತ್ತೊಮ್ಮೆ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ ಜವಾಬ್ದಾರಿ ಚುನಾಯಿತ ಪ್ರತಿನಿಧಿಗಳದ್ದಾಗಿದೆ ಎಂದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮ:
    ಪ್ರಧಾನಿ ನರೇಂದ್ರ ಮೋದಿಜಿಯವರ ಪರಿಕಲ್ಪನೆಯ ಸ್ಮಾರ್ಟ್ ಸಿಟಿಯ ಜೊತೆ ಸ್ಮಾರ್ಟ್ ವಿಲೇಜ್ ಗೂ ಆದ್ಯತೆ ನೀಡಿ ಗ್ರಾಮ ಸಡಕ್ ಯೋಜನೆಯ ಮೂಲಕ ಬೈಂದೂರು ವಿಧಾನ ಸಭಾ ಕ್ಷೇತ್ರದ ಒಟ್ಟು 25.9 ಕೀ.ಮೀ ರಸ್ತೆಯನ್ನು ರೂ 21.75 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ರಾಜ್ಯ ಸರಕಾರದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ರೂ 32.20 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ.ರೂ 10 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಜನಗಳು ವಾಸಿಸುವ ಪ್ರದೇಶಗಳ ರಸ್ತೆ ಅಭಿವೃದ್ದಿಗೆ ಅನುದಾನ ಮಂಜೂರಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದರು.

    ಬೈಂದೂರು ವಿಧಾನಸಭಾ ಕ್ಷೇತ್ರದ ಜನತೆಯ ನಾಡಿಮಿಡಿತ ಅರಿತಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜಲಜೀವನ್ ಮಿಷನ್-ಮನೆಮನೆ ಗಂಗಾ ಯೋಜನೆಯಡಿ ರೂ 560 ಕೋಟಿ ವೆಚ್ಚದಲ್ಲಿ ಕ್ಷೇತ್ರದ ಪ್ರತಿ ಮನೆಗೂ ಶುದ್ದ ಕುಡಿಯುವ ನೀರನ್ನು ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೊದನೆ ನೀಡಿದ್ದರು.ಮುಂದಿನ 50 ವರ್ಷದ ಜನಸಂಖ್ಯೆ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ಪ್ರಸ್ತುತ ಈ ಕಾಮಗಾರಿಯ ಟೆಂಡರ್ ಕರೆಯಲಾಗಿದ್ದು ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲಾಗುವುದು. ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರ ಸಹಕಾರದೊಂದಿಗೆ ಬೈಂದೂರು ವಿಧಾನ ಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.

    ಕೋವಿಡ್-19ರ ಸಂಕಷ್ಟದ ಸಮಯದಲ್ಲಿ ಬಡವರ ಹಾಗೂ ಕಾರ್ಮಿಕರ ಸಹಾಯಕ್ಕೆ ನಿಂತ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬೈಂದೂರ ವಿಧಾನಸಭಾ ಕ್ಷೇತ್ರಾದ್ಯಂತ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 11,435.35 ಕ್ವಿಂಟಲ್ ಪಡಿತರ ವಿತರಿಸಿದ್ದಾರೆ.

    Click here

    Click here

    Click here

    Call us

    Call us

    ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ನೂರಾರು ದಿನಗಳ ಕೆಲಸ ನೀಡುವುದರೊಂದಿಗೆ ಕೂಲಿಯ ಹಣವನ್ನು ಸಹ ಹೆಚ್ಚಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಲ್ಲಿ ವೈಯಕ್ತಿಕ ಇಂಗು ಗುಂಡಿ, ಶೌಚಾಲಯ, ಬಚ್ಚಲು ಗುಂಡಿ, ಕೃಷಿ ಬಾವಿ, ದನದ ಕೊಟ್ಟಿಗೆ ಮನೆ ಹಾಗೂ ಸಾರ್ವಜನಿಕವಾಗಿ ಕೆರೆ ಹೂಳೆತ್ತುವುದು, ಶಾಲೆ ಆವರಣ ಗೋಡೆ, ಗಿಡ ನೆಡುವುದು ಹೀಗೆ ಹಲವಾರು ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದೆ.

    ನರೇಗಾ ಯೋಜನೆಯಲ್ಲಿ 2020-21ನೇ ಸಾಲಿನಲ್ಲಿ 1976 ಕಾಮಗಾರಿಗಳನ್ನು ರೂ 1174.73 ಲಕ್ಷದಲ್ಲಿ ಕಾಮಗಾರಿ ಮಾಡಲಾಗಿದ್ದು, ಪ್ರಸ್ತುತ 2021-22ನೇ ಸಾಲಿನಲ್ಲಿ 2862 ಕಾಮಗಾರಿಗಳನ್ನು ರೂ 2168.65 ಲಕ್ಷದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.ಕೋವಿಡ್ ಸಂಕಷ್ಟದ ಸಮಯದಲ್ಲಿ ದುಡಿಯುವ ಕೈಗಳಿಗೆ ನರೇಗಾದಲ್ಲಿ ಸಾಕಷ್ಟು ಕೆಲಸ ಸಿಕ್ಕಿದ್ದು ಜನರು ಗೂಳೆ ಹೋಗುವುದು ಕಡಿಮೆಯಾಗಿದೆ.

    ಕಾರ್ಮಿಕಾ ಇಲಾಖೆ ವತಿಯಿಂದ ಬೈಂದೂರು ವಿಧಾನ ಸಭಾ ಕ್ಷೇತ್ರಾದ್ಯಂತ 7,000(ಏಳು ಸಾವಿರ) ಆಹಾರ ಸಾಮಗ್ರಿ ಕಿಟ್ ಗಳನ್ನು ನೀಡಲಾಗಿದೆ. ಕಾರ್ಮಿಕ ಇಲಾಖೆ ವತಿಯಿಂದ ಬೈಂದೂರು ಹಾಗೂ ಕುಂದಾಪುರ ತಾಲೂಕಿಗೆ 12,250 ಸುರಕ್ಷಾ ಹಾಗೂ ಪ್ರತಿ ರಕ್ಷಣಾ ಕಿಟ್ ಗಳನ್ನು ನೀಡಲಾಗಿದೆ. ಮುಂದುವರಿದು ಬೈಂದೂರ ಹಾಗೂ ಕುಂದಾಪುರಕ್ಕೆ ಇನ್ನೂ 6,000 ಸುರಕ್ಷಾ ಕಿಟ್ ಗಳು ಬರಲಿದೆ.

    ಪ್ರಾಕೃತಿಕ ವಿಕೋಪ ಪರಿಹಾರ:
    ಪ್ರಾಕೃತಿಕ ವಿಕೋಪದಡಿ ಸಂಭವಿಸಿದ ಭತ್ತದ ಕೃಷಿ ಬೆಳೆ ಹಾನಿ ಹಾಗೂ ತೋಟಗಾರಿಕಾ ಬೆಳೆ ಹಾನಿ ,ಮಾನವ ಜೀವ ಹಾನಿ,ಜಾನುವಾರು ಜೀವ ಹಾನಿ,ಜಾನುವಾರು ಕೊಟ್ಟಿಗೆ ಹಾನಿ,ವಾಸ್ತವ್ಯದ ಮನೆ ಭಾಗಶ: ಹಾಗೂ ಸಂಪೂರ್ಣ ನಾಶಗಳಲ್ಲಿ ಒಟ್ಟು 816 ಪ್ರಕರಣಗಳಿಗೆ ರೂ 1,16,49,814/-(ಒಂದು ಕೋಟಿ ಹದಿನಾರು ಲಕ್ಷದ ನಲವತ್ತೊಂಬತ್ತು ಸಾವಿರದ ಎಂಟು ನೂರು ಹದಿನಾಲ್ಕು ರೂಪಾಯಿ)ಗಳನ್ನು ಪರಿಹಾರವಾಗಿ ಸಂತ್ರಸ್ಥರಿಗೆ ತ್ವರಿತವಾಗಿ ನೀಡಲಾಗಿದೆ.

    ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ:
    ಕಸ್ತೂರಿ ರಂಗನ್ ವರದಿ ಜಾರಿಯಾದರೆ ಬೈಂದೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ಹೊಸೂರು, ಬೈಂದೂರು, ಕೊಲ್ಲೂರು, ಯಳಜಿತ್, ತಗ್ಗರ್ಸೆ, ಮುದೂರು, ಗೋಳಿಹೊಳೆ, ಜಡ್ಕಲ್, ಹಳ್ಳಿಹೊಳೆ, ಆಲೂರು, ಚಿತ್ತೂರು, ಇಡೂರು ಕುಂಞಡಿ, ಕೆರಾಡಿ, ಬೆಳ್ಳಾಲ ಹಾಗೂ ವಂಡ್ಸೆ ಸೇರಿ 15 ಗ್ರಾಮಗಳ ಸಜನರಿಗೆ ತೀವ್ರ ತೊಂದರೆಗೊಳಗಾಗಲಿದ್ದಾರೆ. ಒಬ್ಬ ಸಂಸದನಾಗಿ ಕ್ಷೇತ್ರದ ಜನತೆಯ ಸಮಸ್ಯೆ ಅರಿತು ಕಸ್ತೂರಿ ರಂಗನ್ ವರದಿಯನ್ನು ಜಾರಿ ಮಾಡದೆ ಸಂಪೂರ್ಣವಾಗಿ ತಿರಸ್ಕರಿಸಬೇಕು. ಸ್ಥಳೀಯ ಪರಿಸ್ಥಿತಿ ಅಧ್ಯಯನ ಮಾಡಲು ರಾಜ್ಯ ಹಾಗೂ ಕೇಂದ್ರ ಸರಕಾರದ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಬೇಕು ಹಾಗೂ ವನ್ಯಜೀವ ವಲಯದ ಗಡಿಯಿಂದ 5 ರಿಂದ 10 ಕಿ.ಮೀ ಪರಿಸರ ಸೂಕ್ಷ್ಮ ವಲಯ(ESZ)ದ ಬಫರ್ ಜೋನ್ ಪರಿಮಿತಿಯನ್ನು ರದ್ದುಪಡಿಸಬೇಕು ಎಂದು ಕೇಂದ್ರ ಅರಣ್ಯ,ಪರಿಸರ ಹವಾಮಾನ ಬದಲಾವಣೆ ಸಚಿವರಾದ ಸನ್ಮಾನ್ಯ ಶ್ರೀ ಭೂಪೇಂದ್ರ ಯಾದವ್ ಅವರಿಗೆ ಮನವಿ ಸಲ್ಲಿಸದ್ದೇನೆ ಎಂದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

    23/12/2025

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಶಿಕ್ಷಣ ಅವಶ್ಯಕ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.