ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಬುಧವಾರ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಎನ್.ನಾಗೂರ ಭೇಟಿ ನೀಡಿ ಶಿಕ್ಷಕರ ಕಾರ್ಯವೈಖರಿ ಹಾಗೂ ಶಾಲೆಯ ಭೌತಿಕ ಪರಿಸರದ ಬಗ್ಗೆ ಪರಿಶೀಲಿಸಿದರು.

Call us

Click Here

ಈ ಸಂದರ್ಭ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿ, ಯಶಸ್ಸುಗಳಿಸಲು ನಿರಂತರ ಪರಿಶ್ರಮ ಅಗತ್ಯ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ತಂದೆ-ತಾಯಿ ಗುರುವಿನ ಪಾತ್ರ ಅತಿ ಮುಖ್ಯವಾದದ್ದು. ತಂದೆ-ತಾಯಿ ಮಗುವಿಗೆ ಜೀವ ಕೊಟ್ಟಿದ್ದರೆ ಗುರು ಮಗುವಿನ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಎಲ್ಲರಿಗೂ ಗೌರವ ನೀಡುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದ ಅವರು ಆರೋಗ್ಯದ ಬಗ್ಗೆ ಸದಾ ಜಾಗೃತೆ ವಹಿಸಿ ಎಂದರು.

ಈ ಸಂದರ್ಭದಲ್ಲಿ ಶಾಖೆಯ ಮುಖ್ಯ ಶಿಕ್ಷಕರಾದ ಆನಂದ್ ಮದ್ದೊಡಿ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.

Leave a Reply