ಮುಕ್ತ, ಪಾರದರ್ಶಕ ಚುನಾವಣೆಗೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಡಿ.10ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ನ ದ್ವೆವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

Call us

Click Here

ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ, ವಿಧಾನಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿ ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳು ಮತ್ತು ಮೈಕ್ರೋ ಅಬ್ಸರ್ವರ್ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದರು.

ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಉಪಸ್ಥಿತರಿದ್ದರು.

Leave a Reply