ಡಿ.18ರಂದು ಮೆಗಾ ಲೋಕ್ ಅದಾಲತ್, ರಾಜೀ ಸಂಧಾನದ ಮೂಲಕ ಆಯ್ದ ಪ್ರಕರಣ ಇತ್ಯರ್ಥ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.15: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣಗಳಲ್ಲಿ ಡಿ.18 ರಂದು ಮೆಗಾ ಲೋಕ್ ಅದಾಲತನ್ನು ಆಯೋಜಿಸಲಾಗಿದೆ.

Call us

Click Here

ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.

ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ವೈವಾಹಿಕ ಹಾಗೂ ಜೀವನಾಂಶ ಪ್ರಕರಣ, ಅಕ್ರಮ ಮರಳು ಸಾಗಾಣಿಕೆ, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಹಾಗೂ ಭೂಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ, ಪಿಂಚಣಿ ಪ್ರಕರಣ, ಜನನ ಪ್ರಮಾಣ ಪತ್ರಕ್ಕೆ ಸಂಬAಧಿಸಿದ ಪ್ರಕರಣ, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲಾ ರೀತಿಯ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಮೋಟಾರು ವಾಹನ ಅಪಘಾತ ಪರಿಹಾರ, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ವಿಚ್ಛೇದನ ಪ್ರಕರಣಗಳನ್ನು ಲೋಕ್ ಅದಾಲತ್ನಲ್ಲಿ ಇತ್ಯರ್ಥ್ಯ ಮಾಡಲಾಗುವುದಿಲ್ಲ.

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಸದರಿ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ಸಮಯ ಹಾಗೂ ಸಂಬAಧಗಳನ್ನು ಉಳಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ.

ಕೋವಿಡ್ ಕಾರಣದಿಂದ ನ್ಯಾಯಾಲಯಕ್ಕೆ ಹಾಜರಾಗಲು ಸಾಧ್ಯವಾಗದೇ ಇದ್ದಲ್ಲಿ ಕಕ್ಷಿಗಾರರು ಆನ್ಲೈನ್, ವೀಡಿಯೋ ಕಾನ್ಫ್ರೆನ್ಸ್, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಖುದ್ದಾಗಿ ಹಾಜರಾಗುವ ಮೂಲಕ ಮೆಗಾ ಲೋಕ್ ಅದಾಲತ್ನಲ್ಲಿ ಭಾಗವಹಿಸಿ, ವಿವಾದವನ್ನು ಬಗೆಹರಿಸಿಕೊಳ್ಳಬಹುದಾಗಿದೆ.

Click here

Click here

Click here

Click Here

Call us

Call us

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದೂರವಾಣಿ ಸಂಖ್ಯೆ: 0820-2523355 ಅಥವಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply