ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ನೂತನ ಶಾಲಾ ವಾಹನಗಳ ಲೋಕಾರ್ಪಣಾ ಸಮಾರಂಭ ಡಿ.22ರ ಬುಧವಾರ ಸಂಜೆ 4 ಗಂಟೆಗೆ ಯು.ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ.
ಬೈಂದೂರಿನ ಯು.ಬಿ. ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ವಾಹನಗಳ ಲೋಕಾರ್ಪಣಾ ಸಮಾರಂಭದ ಅಧ್ಯಕ್ಷತೆಯನ್ನು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯು.ಬಿ. ಶೆಟ್ಟಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಎಂಡಿ, ಸಿಇಓ ಮಹಾಬಲೇಶ್ವರ ಎಂ.ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಐಪಿಎಸ್, ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಉಡುಪಿ ವಲಯದ ಸಹಾಯಕ ಮಹಾಪ್ರಬಂಧಕ ರಾಜಗೋಪಾಲ ಬಿ., ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.