ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಪ್ರಕರಣಕ್ಕೆ ಕಡಿವಾಣ ಹಾಕಿ: ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಉಡುಪಿ ಜಿಲ್ಲೆಯಲ್ಲಿ ಗಾಂಜಾ-ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು ಗೃಹ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠರು ಇದನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.

Call us

Click Here

ಅವರು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದು, 2019ರಲ್ಲಿ 203 ಪ್ರಕರಣ, 2020ರಲ್ಲಿ 250 ಪ್ರಕರಣ ಹಾಗೂ 2021ರಲ್ಲಿ ಮತ್ತೂ ಹೆಚ್ಚು ಪ್ರಕರಣ ವರದಿಯಾಗಿದೆ. ವೆಬ್ಸೈಟ್ ಮೂಲಕವೂ ಮಾರಾಟ ಮಾಡಲಾಗುತ್ತಿದೆ. ಯುವ ಜನತೆ ಇದರಿಂದ ದಾರಿ ತಪ್ಪುತ್ತಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಇದರೊಂದಿಗೆ ಮಟ್ಕಾ ದಂದೆ ಸ್ಪಲ್ವ ಕಡಿವಾಣಕ್ಕೆ ಬಂದಿದೆ ಆದರೆ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆಯೂ ಗಮನ ಹರಿಸುವಂತೆಯೂ ಅವರು ಬಿ.ಎಂ ಸುಕುಮಾರ ಶೆಟ್ಟಿ ಅವರು ಕೋರಿದ್ದಾರೆ.

ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯಿಸಿ ಡ್ರಗ್ಸ್ ಹಾಗೂ ಮಟ್ಕಾ ದಂಧೆಯನ್ನು ಮಟ್ಟಹಾಕುವುದು ನಮ್ಮ ಪ್ರಥಮ ಆದ್ಯತೆಯಾಗಿದೆ. ಇದಕ್ಕೆ ಜನರ ಸಹಕಾರವೂ ಅತಿಮುಖ್ಯವಾಗಿದೆ ಎಂದ ಅವರು ಪೊಲಿಸ್ ಇಲಾಖೆಯಿಂದ ಡ್ರಗ್ಸ್ ಸರಬರಾಜು ಜಾಲವನ್ನು ಪತ್ತೆ ಮಾಡಲಾಗುತ್ತಿದೆ, ಪೋಸ್ಟಲ್-ಕೋರಿಯರ್ ಮೂಲಕ ಮೂಲಕ ಬರುವ ಪ್ರಕರಣಗಳನ್ನು ಪತ್ತೆಹಚ್ಚಲಾಗುತ್ತಿದೆ. ಬೀಟ್ ಪೊಲೀಸ್ ಸೇವೆಯನ್ನು ಬಿಗಿಮಾಡಲಾಗಿದೆ. ಅಪರಾಧ ಕೃತ್ಯಗಳಲ್ಲಿ ತೊಡಗಿರುವ ವಿದೇಶಿಯರ ದಸ್ತಗಿರಿ ಮಾಡಿ ಪಾಸ್ಪೋರ್ಟ್ ಮಟ್ಟಹಾಕಲಾಗುತ್ತಿದೆ. ಒಂದಕ್ಕಿಂತ ಹೆಚ್ಚು ಭಾರಿ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತಿದೆ ಎಂದರು.

Leave a Reply