Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾರಂತ ಹುಟ್ಟೂರ ಪ್ರಶಸ್ತಿಗೆ ಮುಂಬೈನ ರಂಗನಟ ಸದಾನಂದ ಸುವರ್ಣ ಆಯ್ಕೆ
    ಉಡುಪಿ ಜಿಲ್ಲೆ

    ಕಾರಂತ ಹುಟ್ಟೂರ ಪ್ರಶಸ್ತಿಗೆ ಮುಂಬೈನ ರಂಗನಟ ಸದಾನಂದ ಸುವರ್ಣ ಆಯ್ಕೆ

    Updated:25/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    News sep21_bmr1ಕುಂದಾಪುರ: ಮುಂಬೈನ ರಂಗನಟ, ನಿರ್ದೇಶಕ, ರಂಗ ಸಂಯೋಜಕ, ಟಿ.ವಿ, ಸೀರಿಯಲ್, ಸಾಕ್ಷ್ಯಚಿತ್ರ ಮತ್ತು ಚಲನಚಿತ್ರಗಳ ನಿರ್ಮಾಪಕ, ನಾಟಕ, ಕಥೆ, ಕಾದಂಬರಿಗಳ ಲೇಖಕ, ಪ್ರಕಾಶಕ, ಹಲವು ಪ್ರತಿಷ್ಠಾನಗಳಿಗೆ ಪ್ರಾಯೋಜಕ, ನಾಟಕರಂಗಕಲೆಯ ತರಬೇತಿಗಾರನಾಗಿ ಸೇವೆ ಸಲ್ಲಿಸುತ್ತಿರುವ ಸದಾನಂದ ಸುವರ್ಣ ಅವರಿಗೆ ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಸಮಿತಿ ಆಯ್ಕೆ ಮಾಡಿರುವುದಾಗಿ ಕೋಟತಟ್ಟು ಪಂಚಾಯಿತಿ ಅಧ್ಯಕ್ಷರು ಮತ್ತು ಕಾರಂತ ಪ್ರತಿಷ್ಠಾನದ ಅಧ್ಯಕ್ಷ ಎಚ್.ಪ್ರಮೋದ್ ಹಂದೆ ತಿಳಿಸಿದರು.

    Click Here

    Call us

    Click Here

    ಅವರು ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ, ಕಾರಂತರ ಸಮಕಾಲೀನರಾದ ಸದಾನಂದ ಸುವರ್ಣರ ಈ ಬಾರಿಯ ಕಾರಂತ ಹುಟ್ಟೂರ ಪ್ರಶಸ್ತಿಗೆ ಸೂಕ್ತ ವ್ಯಕ್ತಿ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಕನ್ನಡ, ತುಳು, ಬೆಂಗಾಲಿ ಭಾಷೆಗೆ ಸಂಬಂಧಪಟ್ಟ ಹಲವು ಸಾಕ್ಷ್ಯಚಿತ್ರಗಳ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ರೂಪ ದರ್ಶನ, ಗುಡ್ಡದ ಭೂತ, ಕಣ್ಣು ತೆರೆಯಿತು, ಕುರುಡನ ಸಂಗೀತ, ವಿಷಮ ಗಳಿಗೆ ಮೊದಲಾದ ಧಾರವಾಹಿಗಳಿಗೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಘಟಶ್ರಾದ್ಧ ಚಿತ್ರ ನಿರ್ಮಾಣಕ್ಕಾಗಿ ಸುವರ್ಣ ಅವರಿಗೆ ಸ್ವರ್ಣ ಕಮಲ ಪ್ರಶಸ್ತಿ ಒಲಿದು ಬಂದಿದೆ ಅಲ್ಲದೇ ಕಾರಂತರ ಬಗ್ಗೆ ಸಾಕ್ಷ್ಯಚಿತ್ರ ನಿರ್ಮಿಸಿದ ಹಿರಿಮೆ ಕೂಡ ಇವರಿಗೆ ಸಲ್ಲುತ್ತದೆ. ಈ ಹಿನ್ನಲೆಯಲ್ಲಿ ಆಯ್ಕೆ ಸಮಿತಿಯ ಆಯ್ಕೆಯ ಮೇರೆ ಅಕ್ಟೋಬರ್ 10ರಂದು ಕೋಟ ಕಾರಂತ ಥೀಂ ಪಾರ್ಕನಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆ ಎಂದರು.

    ಈ ಬಾರಿ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಟ್ರಸ್ಟ್(ರಿ.) ಉಡುಪಿ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.) ಕೋಟ ಸಾರಥ್ಯದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಅಕ್ಟೋಬರ್ 1 ರಿಂದ 10ರ ವರೆಗೆ ಸಾಹಿತ್ಯಿಕ ಸಾಂಸ್ಕೃತಿಕ ದಿಬ್ಬಣ ಚಿತ್ತಾರ 2015 ಕಾರ್ಯಕ್ರಮಗಳು ನಡೆಯಲಿದೆ. ಅಕ್ಟೋಬರ್ 1ರಂದು ಮಹಿಳಾ ಸಾಹಿತ್ಯ ಸಾಮವೇಶ ಚೇತನ, 2ರಂದು ನೃತ್ಯ ಮತ್ತು ನಾಟಕ ಕಾರ್ಯಕ್ರಮ, 3ರಂದು ತಾಳಮದ್ದಳೆ, 4ರಂದು ಪುಟಾಣಿಗಳ ಸಮಾವೇಶ ಅಕ್ರೂಟ್, 5ರಂದು ಉಡುಪಿ ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಮಾವೇಶ ಪ್ರೇರಣ, 6ರಂದು ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಮ್ಮಟ, 7ರಂದು ಪ್ರಗತಿಪರ ಸಮಾವೇಶ ಒತ್ತಾಸೆ, 8ರಂದು ಉರಗ ಪ್ರದರ್ಶನ- ಪ್ರಾತ್ಯಕ್ಷಿಕೆ ಹಾವು ನಾವು, 9ರಂದು ಪಂಚಾಯಿತಿ ಹಬ್ಬ ಮತ್ತು 10ರಂದು ಕಾರಂತರ ಹುಟ್ಟೂರ ಪ್ರಶಸ್ತಿ ಪ್ರಧಾನ , ಯಕ್ಷನಾಟ್ಯ ವೈಭವ ಸಂಗೀತ ಸುಧೆ ಚಿತ್ತ ಚಿತ್ತಾರ ನಡೆಯಲಿದೆ. ಅಲ್ಲದೇ ಅಂತರಾಷ್ಟ್ರೀಯ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ ಕುಂದಾಪುರ ಅವರಿಂದ ಕಾರ್ಟೂನ್ ಹಬ್ಬ ಮತ್ತು ಕಾರಂತ ಮಹಾಸಾಗರ ಸಾಕ್ಷ್ಯಚಿತ್ರ ಪ್ರದರ್ಶನ ನಡೆಯಲಿದೆ ಎಂದರು.

    ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಸದಸ್ಯ ಸುಬ್ರಾಯ ಆಚಾರ್ಯ ಮಣೂರು, ಕೋಟತಟ್ಟು ಪಂಚಾಯಿತಿ ಸದಸ್ಯ ಸತೀಶ್ ಬಾರಿಕೇರಿ ಮತ್ತು ಥೀಂ ಪಾರ್ಕ ಮಾಧ್ಯಮ ಪ್ರಚಾರ ಸಂಚಾಲಕ ಅಶ್ವಥ್ ಆಚಾರ್ಯ ಯಡಬೆಟ್ಟು ಉಪಸ್ಥಿತರಿದ್ದರು.

    News sep21_1

    Click here

    Click here

    Click here

    Call us

    Call us

    Karantha Theme park Kota
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    thirteen − 3 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.