ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಮೆಮೋರಿಯಲ್ ಆಂಗ್ಲಮಾಧ್ಯಮ ಪ್ರೌಢಶಾಲೆಗಳಲ್ಲಿ 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸುರಕ್ಷತಾ ಕಾರ್ಯಾಗಾರ ಜರುಗಿತು.
ಕುಂದಾಪುರದ ಸಂಚಾರಿ ಪೊಲೀಸ್ ಠಾಣೆಯ ಆರಕ್ಷಕ ನವೀನ್ ಕುಮಾರ್ ಮಾತನಾಡಿ, ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಸಂಸ್ಥೆಯ ಉಪಪ್ರಾಂಶುಪಾಲೆ ಶುಭಾ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಸಂಯೋಜಕ ಶಿಕ್ಷಕರಾದ ಕವಿತಾ ಪಿ ಮತ್ತು ವೀರೇಂದ್ರ ನಾಯಕ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಶಿಕ್ಷಕಿ ಭಾಗ್ಯ ಸ್ವಾಗತಿಸಿ, ವಂದಿಸಿದರು.