ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಥಳಿಸಿದ ಪ್ರಕರಣ: ಕೋಟ ಪಿಎಸ್ಐ ಸಂತೋಷ್ ಬಿ. ಪಿ. ಅಮಾನತು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಕೋಟತಟ್ಟು ಗ್ರಾಮದ ಕೊರಗ ಕಾಲೋನಿಯ ಮೆಹೆಂದಿ ಕಾರ್ಯಕ್ರಮಕ್ಕೆ ನುಗ್ಗಿ ಕೊರಗ ಸಮುದಾಯದವರನ್ನು ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಠಾಣೆ ಪಿಎಸ್ಐ ಸಂತೋಷ್ ಬಿ.ಪಿ ಅವರನ್ನು ಅಮಾನತು ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿದೆ.

Call us

Click Here

ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಕೋಟದಲ್ಲಿ ನಡೆದ ಕೊರಗ ಸಮುದಾಯದವರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಆಧಾರದಲ್ಲಿ ಕೋಟ ಪಿಎಸ್ಐ ಅವರನ್ನು ಪಶ್ಚಿಮ ವಲಯ ಐಜಿಪಿಯವರು ಅಮಾನತು ಮಾಡಿದ್ದಾರೆ. ಇನ್ನು ಪ್ರಕರಣದಲ್ಲಿನ ಐದು ಮಂದಿ ಪೊಲೀಸ್ ಸಿಬ್ಬಂದಿಗಳನ್ನು ಕೋಟ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.

Leave a Reply