ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರ ಉಡುಪಿ, ಸಂಚಾರಿ ಪೋಲಿಸ್ ಠಾಣೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ದಿನಾಚರಣೆಯ ಅಂಗವಾಗಿ ಯುವ ಜನತೆಗೆ ಅಂತರ್ಜಾಲ ಹಾಗೂ ಸೈಬರ್ ಬಳಕೆಯ ಮುನ್ನೆಚ್ಚರಿಕೆಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.
ಉದ್ಯಮಿ, ರೋಟರಿ ಕುಂದಾಪುರ ನಿಕಟಪೂರ್ವ ಅಧ್ಯಕ್ಷರಾದ ಕೆ.ಆರ್.ನಾಯಕ್ ಸಮಾರಂಭ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಸಂಚಾರಿ ಪೋಲಿಸ್ ಠಾಣೆಯ ಠಾಣಾಧಿಕಾರಿ ಸುಧಾ ಪ್ರಭು, ಯುವ ಸ್ಪಂದನ ಕೇಂದ್ರದ ತಾಲೂಕು ಪರಿವರ್ತಕರಾದ ರಮೇಶ್ ಗಾಣಿಗ ಹಾಗೂ ಕಾಲೇಜಿನ ಹಿರಿಯ ಉಪನ್ಯಾಸಕಿ ಮಮತಾ ರೈ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರ ಸಂಚಾರಿ ಠಾಣೆಯ ಸಿಬ್ಬಂದಿ ನವಿನ್ ಕುಮಾರ್ ಕಾರ್ಯಾಗಾರವನ್ನು ನಿವರ್ಹಿಸಿದರು. ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕಿ ಮಮತಾ ರೈ ಸ್ವಾಗತಿಸಿ, ಉಪನ್ಯಾಸಕ ಉದಯ್ ನಾಯ್ಕ್ ನಿರೂಪಿಸಿ ವಂದಿಸಿದರು.