ಮೊಬೈಲ್ ಆ್ಯಪ್ ಸಾಲದ ಹೊರೆ: ಹೆಮ್ಮಾಡಿಯ ಯುವಕ ನೇಣಿಗೆ ಶರಣು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಡಿ.30:
ಮೊಬೈಲ್ ಆ್ಯಪ್ ಮೂಲಕ ಮಾಡಿಕೊಂಡ ಸಾಲ ಮರುಪಾವತಿಸಲಾಗದೇ, ಕಂಪೆನಿ ಉದ್ಯೋಗಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಮ್ಮಾಡಿ ಗ್ರಾಮದಲ್ಲಿ ನಡೆದಿದೆ. ಹರೆಗೋಡು ಕೊಳಹಿತ್ಲು ನಿವಾಸಿ ಸಂಜೀವ ದೇವಾಡಿಗ ಎಂಬುವವರ ಪುತ್ರ ವಿಘ್ನೇಶ್ ದೇವಾಡಿಗ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

Call us

Click Here

ವಿಘ್ನೇಷ್ ತಾಯಿ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ಎದ್ದು ನೋಡುವಾಗ ಮನೆಯ ಬಾಗಿಲು ತೆರೆದಿತ್ತು. ಅನುಮಾನಗೊಂಡು ಹೊರಗಡೆ ಬಂದು ನೋಡಿದಾಗ ಮನೆ ಎದುರಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿತ್ತು.

ಕೊಳಹಿತ್ಲು ನಿವಾಸಿ ಸಂಜೀವ ಹಾಗೂ ಕನಕ ದಂಪತಿಗಳ ನಾಲ್ವರು ಮಕ್ಕಳಲ್ಲಿ ಎರಡನೇಯವನಾದ ವಿಘ್ನೇಶ್ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು ಲಾಕ್ ಡೌನ್ ಬಳಿಕ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ಸ್ನೇಹಿತನೊಂದಿಗೆ ಸೇರಿ ಬ್ರಹ್ಮಾವರ ಸಮೀಪ ಚಪ್ಪಲಿ ಹೋಲ್ ಸೆಲ್ ಶೋರೂಂ ಆರಂಭಿಸಿದ್ದು, ಉದ್ಯಮಕ್ಕೆ ಬಂಡವಾಳ ಹಾಕುವ ಉದ್ದೇಶದಿಂದ ಮೊಬೈಲ್ ಆ್ಯಪ್ ಫೈನಾನ್ಸ್ ಮೂಲಕ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ವ್ಯವಹಾರ ತಕ್ಕಮಟ್ಟಿಗೆ ಕೈಹಿಡಿಯಲಿಲ್ಲ. ಸಾಲ ನೀಡಿದ ಫೈನಾನ್ಸ್ ಕಡೆಯಿಂದ ಕಿರುಕುಳ ಹೆಚ್ಚಾಗಿದ್ದು, ಇದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

ಡೆತ್ ನೋಟ್ ಪತ್ತೆ:
ವಿಘ್ನೆಶ್ ಬರೆದಿರುವ ಡೆತ್ ನೋಟ್ ಪತ್ತೆಯಾಗಿದ್ದು, “ನನ್ನ ಸಾವಿಗೆ ಕಾರಣ ನಾನು ಮಾಡಿಕೊಂಡಿರುವ ಸಾಲ. ಮೊಬೈಲ್ ಆ್ಯಪ್ ಮೂಲಕ ಮಾಡಿಕೊಂಡ ಸಾಲ ನನಗೆ ತೀರಿಸಲು ಆಗುತ್ತಿಲ್ಲ. ಆದ್ದರಿಂದ ನಾನು ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾಲ ಇದೆ ಕಟ್ಟಿ ಎಂದು ಯಾರಾದರೂ ಕರೆ ಮಾಡಿದರೆ ಅವನು ನಮಗೆ ಗೊತ್ತಿಲ್ಲ ಅಥವಾ ಸತ್ತು ಹೋದ ಎಂದು ಹೇಳಿ ಬಿಡಿ. ಎಲ್ಲರಿಗೂ ಮೋಸ ಮಾಡಿ ಹೋಗುತ್ತಿದ್ದೇನೆ. ಕ್ಷಮಿಸಿ ಬಿಡಿ. ಕೆಳಗಡೆ ಆಫೀಸ್ ಕೆಲಸ ಮಾಡುವವನ ನಂಬರ್ ಇದೆ. ಕಾಲ್ ಮಾಡಿ ತಿಳಿಸಿ ಬಿಡಿ. ಶುಕ್ರವಾರ ಸಂಬಳ ಬರುತ್ತದೆ ಎಂದು ಎಟಿಎಂ ಪಾಸ್ವರ್ಡ್ ಬರೆದಿದ್ದಾನೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply