ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೀಜಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ ಪುಣ್ಯಕೋಟಿ ಕಟ್ಟಡದ ಉದ್ಘಾಟನಾ ಸಮಾರಂಭ ಗೋಪಾಡಿ ಶ್ರೀ ಚಿಕ್ಕು ಅಮ್ಮ ದೈವಸ್ಥಾನದ ಬ್ರಹ್ಮಲಿಂಗೇಶ್ವರ ಸಭಾಭವನದಲ್ಲಿ ಜರುಗಿತು.
ದ.ಕ.ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ನೂತನ ಕಟ್ಟಡ ಉದ್ಘಾಟಿಸಿ ಶುಭ ಹಾರೈಸಿದರು. ದ.ಕ.ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ನಿರ್ದೇಶಕ ಎ.ಜಗದೀಶ್ ಕಾರಂತ, ನರಸಿಂಹ ಕಾಮತ್ ಸಾಣೂರು, ಸುಧಾಕರ ಶೆಟ್ಟಿ, ನಾಮ ನಿರ್ದೇಶಕ ಡಿ.ಗೋಪಾಲ ಕೃಷ್ಣ ಕಾಮತ್, ಡಾ, ನಿತ್ಯಾನಂದ ಭಕ್ತ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಿರಿಯ ನಿರ್ದೇಶಕ ಗಣೇಶ್ ಬಿ, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಮತಿ ನಾಗರಾಜ, ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸರೋಜ ಎಸ್ ಪೂಜಾರಿ, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಶೇಖರ ಚಾತ್ರಬೆಟ್ಟು, ಶ್ರೀ ರಘುರಾಮ ಭಜನಾ ಮಂಡಳಿ ಗೌರವಧ್ಯಕ್ಷ ಅಶೋಕ ಪೂಜಾರಿ ವಡ್ಡಿನಮನೆ, ಬೀಜಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಾಹಕ ರಾಜು ಬಿ, ಅಧ್ಯಕ್ಷ ಸೀತಾರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.