ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಕರ್ಕುಂಜೆ ಶಾಲೆಗೆ ವರ್ಗಾವಣೆಗೊಂಡಿರುವ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಚಂದ್ರ ಶೆಟ್ಟಿ ಇವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡುವ ಕಾರ‍್ಯಕ್ರಮ ಜರುಗಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಅರುಣಾ ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹೆಗ್ಡೆ, ಕಾಳಾವರ ಗ್ರಾಮ ಪಂಚಾಯತ್ ಸದಸ್ಯರುಗಳಾದ ಚಂದ್ರ ಪೂಜಾರಿ, ಪಾರ್ವತಿ ಶೇರೆಗಾರ್, ಅಸೋಡು ಹಾಲು ಉತ್ಪಾದಕರ ಸಂಘ ಮಾಜಿ ಅಧ್ಯಕ್ಷ ದಯಾನಂದ ಹೆಗ್ಡೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗಪ್ಪಯ್ಯ ಶೇರಿಗಾರ್, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ನಾಗರಾಜ್ ಶೆಟ್ಟಿಗಾರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ದಾನಿಗಳಾದ ಅಶೋಕ್ ಶೋಭರಾವ್ ಇವರ ಮಕ್ಕಳಿಂದ ಸಮವಸ್ತ್ರ ವಿತರಣೆ, ಹಾಗೂ ವೆಂಕಟ ರಮಣ ಇವರ ಮಕ್ಕಳಿಂದ ಬಿಸಿಯೂಟ ಯೋಜನೆಗೆ ಗ್ರೈಂಡರ್‌ಗಳನ್ನು ಶಾಲೆಗೆ ಹಸ್ತಾಂತರ ಮಾಡಲಾಯಿತು.
ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ ಸ್ವಾಗತಿಸಿದರು. ಅತಿಥಿ ಶಿಕ್ಷಕ ಆನಂದ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಮಂಗಳ ಸನ್ಮಾನಿತರನ್ನು ಪರಿಚಯಿಸಿದರು. ಗೌರವ ಶಿಕ್ಷಕಿ ರೂಪ ವಂದಿಸಿದರು.