ಕೊರಗರು, ದಲಿತ ಬಂಧುಗಳು ಭಯ ಪಡುವ ಅಗತ್ಯವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಕೊರಗರು, ಗಿರಿಜನರು, ದಲಿತ ಬಂಧುಗಳು ಭಯ ಪಡುವ ಅವಶ್ಯಕತೆಯಿಲ್ಲ. ನಾನು, ಗೃಹ ಸಚಿವರು, ಸರ್ಕಾರ ನಿಮ್ಮ ಜೊತೆಯಿದೆ. ಅವಶ್ಯವಿದ್ದರೆ ಸಿಎಂಗೂ ಮಾಹಿತಿ ನೀಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Call us

Click Here

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟದಲ್ಲಿ ಗಿರಿಜನರ ಮೇಲೆ ಪೋಲಿಸರಿಂದ ವಿನಾಕಾರಣ ಹಲ್ಲೆ ಮಾಡಲಾಗಿತ್ತು. ಒಬ್ಬ ಪಿ.ಎಸ್.ಐ ಸಸ್ಪೆಂಡ್ ಮಾಡಿ ಆರು ಮಂದಿ ಪೊಲೀಸರ ವರ್ಗಾವಣೆ ಕೂಡ ಮಾಡಲಾಗಿದೆ. ನಾನು ಸ್ಥಳಕ್ಕೆ ಭೇಟಿ ನೀಡಿದ್ದೆ. ಎಸ್ಪಿ ಮತ್ತು ಜಿಲ್ಲಾಧಿಕಾರಿಗಳ ಜತೆ ಚರ್ಚೆ ನಡೆಸಿದ್ದೆ. ಈ ಮಧ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿತ್ತು. ಒಬ್ಬ ಕಾನ್ಸ್ಟೇಬಲ್ ನನ್ನ ಮೇಲೆ ಹಲ್ಲೆಯಾಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದಿವಾಸಿ ಕೇರಿಯಲ್ಲಿ ಆತಂಕ ಸೃಷ್ಟಿಯಾಗಿತ್ತು. ಪ್ರಕರಣದ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಅಲ್ಲಿರುವ ಪರಿಸ್ತಿತಿಯನ್ನು ಗೃಹಸಚಿವರಿಗೆ ವಿವರಿಸಿದ್ದೇನೆ ಎಂದರು.

ಯಾವುದೇ ಕಾರಣಕ್ಕೂ ಅಲ್ಲಿರುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಎಸ್ಪಿ ಅವರಿಗೆ ಕರೆ ಮಾಡಿ ಪ್ರಕರಣದ ವಿಚಾರ ಕಾನೂನು ಪ್ರಕಾರ ದೂರು ದಾಖಲಿಸಲು ಸೂಚಿಸಿದ್ದಾರೆ. ದಲಿತರಿಗೆ ಯಾವುದೇ ತೊಂದರೆಯಾಗದಂತೆ ನೋಡುಕೊಳ್ಳುವಂತೆ ಗೃಹಸಚಿವರು ಸೂಚಿಸಿದ್ದಾರೆ ಎಂದರು.

ಇದನ್ನೂ ಓದಿ:
► ಕೋಟ ಕೊರಗ ಸಮುದಾಯದವರ ಮೇಲೆ ಪ್ರಕರಣ ದಾಖಲಿಸಿದ್ದು ನಾಚಿಕೆಗೇಡಿನ ಸಂಗತಿ: ಸಿದ್ದರಾಮಯ್ಯ – https://kundapraa.com/?p=56574 .

Leave a Reply