ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.4: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ವರ್ಗದ ಜಮೀನು ಹೊಂದಿರುವ ರೈತರಿಗೆ ಬಿದಿರು ಕೃಷಿ ಮಾಡಲು, ಪ್ರತೀ ಎಕರೆಗೆ ಪ್ರತೀ ವರ್ಷ 18,000 ರೂ. ನಂತೆ ಮೂರು ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.