ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ, ಬೆಂಗಳೂರಿನಲ್ಲಿ 10, 12ನೇ ತರಗತಿ ಹೊರತುಪಡಿಸಿ ಶಾಲಾ-ಕಾಲೇಜು ಆಫ್‌ಲೈನ್ ತರಗತಿ ರದ್ದು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು:
ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಬೆಂಗಳೂರು ನಗರದಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಆಫ್ಲೈನ್ ತರಗತಿ ಬಂದ್ ಮಾಡಿ ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಸಲು ಸೂಚಿಸಲಾಗಿದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರಲಿದೆ. ಶಾಲಾ ಕಾಲೇಜು ನಿಯಮ ಹೊರತುಪಡಿಸಿ ಉಳಿದೆಲ್ಲಾ ನಿಯಮಗಳು ರಾಜ್ಯಕ್ಕೆ ಅನ್ವಯವಾಗಲಿದೆ.

Call us

Click Here

ಮುಖ್ಯಮಂತ್ರಿಗಳ ಗೃಹಕಛೇರಿಯಲ್ಲಿ ನಡೆದ ಸಭೆ ಬಳಿಕ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು. ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ. ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧಾರ
ಕಳೆದ 3 ದಿನಗಳಿಂದ ಕೊವಿಡ್ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. 3ರಿಂದ 6, 6ರಿಂದ 9 ಸಾವಿರ ಆಗ್ತಿದೆ. ಐದಾರು ದಿನಗಳಲ್ಲಿ 10 ಸಾವಿರ ದಾಟುವ ಅಪಾಯ ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ 10 ಸಾವಿರ ದಾಟಿದೆ ಎಂದು ಹೇಳಿದ್ದಾರೆ. ಶೇ 80ರಿಂದ 85ರಷ್ಟು ಸೋಂಕು ಮೆಟ್ರೊ ನಗರಗಳಲ್ಲಿ ಕಾಣಿಸಿಕೊಳ್ತಿದೆ. ದೇಶದೆಲ್ಲೆಡೆ ಇದೇ ವಿದ್ಯಮಾನ ವರದಿಯಾಗಿದೆ. ಅಮೆರಿಕದಲ್ಲಿಯೂ ಪ್ರಸ್ತುತ 5 ಕೋಟಿಗೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಪರಿಸ್ಥಿತಿ ನಿರ್ವಹಿಸಲು ಬೆಂಗಳೂರಿಗೆ ಒಂದು, ರಾಜ್ಯದ ಇತರೆಡೆಗೆ ಮತ್ತೊಂದು ನಿಯಮಾವಳಿ ರೂಪಿಸಲು ನಿರ್ಧರಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ನೈಟ್ ಕರ್ಫ್ಯೂ ಮುಂದುವರಿಕೆ, ವೀಕೆಂಡ್ ಕರ್ಫ್ಯೂ ಬಗ್ಗೆ ಚರ್ಚೆ
ನೈಟ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಚರ್ಚಿಸಲಾಗಿದೆ. ನೈಟ್ ಕರ್ಫ್ಯೂ ಮುಂದುವರಿಕೆ ಜೊತೆಗೆ ಕಠಿಣ ರೂಲ್ಸ್ ಜಾರಿ ಮಾಡುವ ಬಗ್ಗೆ ಹೇಳಲಾಗಿದೆ. ಎರಡು ವಾರಗಳ ಕಾಲ ನೈಟ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಮಾತನಾಡಲಾಗಿದೆ. ಪ್ರವಾಸೊದ್ಯಮ ಸ್ಥಳಗಳಿಗೆ ನಿರ್ಬಂಧ ವಿಧಿಸುವುದು. ವೀಕೆಂಡ್ ಕರ್ಫ್ಯೂ ಜಾರಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯಗಳು ಕೇಳಿಬಂದಿದೆ. ವೀಕೆಂಡ್ ಕರ್ಫ್ಯೂ ಜಾರಿ ಮಾಡಿದರೆ ಪ್ರವಾಸಿ ತಾಣಗಳಲ್ಲಿ ಜನ ಜಂಗುಳಿ ನಿಯಂತ್ರಿಸಬಹುದು. ಇಲ್ಲದಿದ್ದರೆ ಕಷ್ಟ. ಬನ್ನೇರುಘಟ್ಟ ಪಾರ್ಕ್ಗೆ ಕಳೆದೊಂದು ವಾರದಿಂದ 10 ಸಾವಿರಕ್ಕೂ ಹೆಚ್ಚು ಜನ ವಿಸಿಟ್ ಮಾಡಿದ್ದಾರೆ. ಉಳಿದ ಪ್ರವಾಸಿ ತಾಣಗಳೂ ತುಂಬುತ್ತಿವೆ ಎಂಬ ಬಗ್ಗೆ ಮಾತುಕತೆ ನಡೆದಿದೆ.

ಕೊರೊನಾ ನಿಯಂತ್ರಣ ಸಭೆಯಲ್ಲಿ ವಿಸ್ತೃತ ಚರ್ಚೆ
ಕೊರೊನಾ ನಿಯಂತ್ರಣ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಗೃಹಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಜೊತೆ ಸಿಎಂ ಮಹತ್ವದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ಬೇರೆ ಬೇರೆ ರಾಜ್ಯಗಳ ಪಾಸಿಟಿವಿಟಿ ರೇಟ್ ಬಗ್ಗೆ ಚರ್ಚೆ ನಡೆಸಲಾಗಿದೆ. ದೆಹಲಿ ಮಾದರಿಯ ನಿಯಮಗಳ ಬಗ್ಗೆ ಬೊಮ್ಮಾಯಿಗೆ ಮಾಹಿತಿ ನೀಡಲಾಗಿದೆ. ಸಿಎಂ ಬೊಮ್ಮಾಯಿಗೆ ತಾಂತ್ರಿಕ ಸಲಹಾ ಸಮಿತಿ ಮಾಹಿತಿ ನೀಡಿದೆ. ದೆಹಲಿಯಲ್ಲಿನ ಕ್ರಮಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಸಮಿತಿ, ದೆಹಲಿ ಮಾದರಿ ಅನುಸರಿಸುವುದೇ ಸೂಕ್ತವೆಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

Click here

Click here

Click here

Click Here

Call us

Call us

ಸಭೆಯಲ್ಲಿ 50:50 ರೂಲ್ಸ್ ಜಾರಿಗೊಳಿಸುವ ಬಗ್ಗೆ ಒತ್ತಾಯ ಕೇಳಿಬಂದಿದೆ. ಆಕ್ಸಿಜನ್ ಬೆಡ್ಗಳ ವ್ಯವಸ್ಥೆ ಕುರಿತು ಸಿಎಂ ಮಾಹಿತಿ ಪಡೆದಿದ್ದಾರೆ. ಬೆಡ್ಗಳನ್ನ ಹೆಚ್ಚಳ ಮಾಡಿಕೊಳ್ಳಬೇಕೆಂದು ತಜ್ಞರಿಂದ ಮಾಹಿತಿ ಸಿಕ್ಕಿದೆ. ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿನ ಟಫ್ ರೂಲ್ಸ್ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಆಕ್ಸಿಜನ್ ಬೆಡ್, ಐಸಿಯು ಬೆಡ್ಗಳ ಬಗ್ಗೆ ಕೂಡ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ನೈಟ್ಕರ್ಫ್ಯೂ ಜತೆಗೆ ಕಠಿಣ ರೂಲ್ಸ್ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪ್ರವಾಸಿತಾಣಗಳಿಗೆ ನಿರ್ಬಂಧ ವಿಧಿಸುವ ಕುರಿತು ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ. ಸಾರ್ವಜನಿಕ ಸಮಾರಂಭಗಳಲ್ಲಿ ಜನರಿಗೆ ಮಿತಿ ನಿಗದಿ ಸಾಧ್ಯತೆ ಬಗ್ಗೆಯೂ ಮಾತನಾಡಲಾಗಿದೆ.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ.

ಕರ್ನಾಟಕ ರಾಜ್ಯಾದ್ಯಂತ 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ.

ವೀಕೆಂಡ್ ಕರ್ಫ್ಯೂ ವೇಳೆ ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ

ಸರ್ಕಾರಿ ಕಚೇರಿಗಳು, ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ (50:50 ನಿಯಮ) ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ.

ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ.

ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು.

ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್​ಟಿಪಿಸಿಆರ್ ಕಡ್ಡಾಯ ಆಗಿರಲಿದೆ.

ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ.

ರ‍್ಯಾಲಿ, ಧರಣಿ, ಪ್ರತಿಭಟನೆಗೆ ಇಲ್ಲ ಅವಕಾಶ

ಶಾಲಾ ಕಾಲೇಜು ರಜೆ ಬೆಂಗಳೂರಿಗೆ ಮಾತ್ರ ಅನ್ವಯ ಆಗುತ್ತದೆ. ಆದರೆ, ಉಳಿದ ನಿಯಮಗಳು ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ

Leave a Reply