ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡ ಉದ್ಘಾಟನೆ

Call us

Call us

Call us

ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ: ಡಾ. ಎಂ. ಎನ್. ರಾಜೇಂದ್ರ ಕುಮಾರ್

Call us

Click Here

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಮರವಂತೆ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶಾಖೆಯ ಆವರಣದಲ್ಲಿ ಶುಕ್ರವಾರ ಸರಳವಾಗಿ ಜರುಗಿತು.

ದ.ಕ ಜಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಸಹಕಾರ ಕ್ಷೇತ್ರದಲ್ಲಿ ಯಾವುದೇ ಸೌಲಭ್ಯಗಳಿದ್ದರೂ ನೇರವಾಗಿ ಫಲಾನುಭವಿಯನ್ನು ತಲುಪುತ್ತದೆ. ಸೇವಾಧರ್ಮದಿಂದಾಗಿ ಸಹಕಾರ ಕ್ಷೇತ್ರವಿಂದು ಜನರ ಬ್ಯಾಂಕುಗಳಾಗಿ ಪರಿವರ್ತನೆಗೊಂಡಿದೆ. ಗ್ರಾಮೀಣ ಪ್ರದೇಶದ ಕಟ್ಟಕಡೆಯ ಜನರನ್ನೂ ತಲುಪುವ ಕೊಂಡಿಯಾಗಿ, ಸದಸ್ಯರ ನೋವು-ನಲಿವುಗಳಲ್ಲಿ ಸ್ಪಂದಿಸುವ ಸ್ವಾತಂತ್ರ್ಯದಿಂದ ಸಹಕಾರಿ ಸಂಘಗಳು ಜನರ ಜೀವನಾಡಿಯಾಗಿ ಬೆಳೆದಿದೆ ಎಂದರು.

ಅವಿಭಜಿತ ದ.ಕ ಜಿಲ್ಲೆಯಲ್ಲಿ ಕೃಷಿಪತ್ತಿನ ಸಹಕಾರ ಸಂಘಗಳು ಲಾಭದಲ್ಲಿ ಮುನ್ನೆಡೆಯುತ್ತಿದೆ. 26 ವರ್ಷಗಳಿಂದ ದೇಶದಲ್ಲಿಯೇ ಕೃಷಿ ಸಾಲ ಸಮರ್ಪಕವಾಗಿ ಮರುಪಾವತಿಯಲ್ಲಿ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಇಂಥಹ ಸಹಕಾರ ಸಂಘಗಳು ಸದೃಢವಾಗಿ ಬೆಳೆದರೆ ಮಾತ್ರ ಇಡೀ ಸಹಕಾರ ವ್ಯವಸ್ಥೆ ಉಳಿಯಲು ಸಾಧ್ಯ ಎಂದ ಅವರು, ಸಹಕಾರ ಮನೋಭಾವದಿಂದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಸದೃಢವಾಗಿ ಬೆಳೆದಿದೆ. ಸುಸಜ್ಜಿತವಾದ ಸ್ವಂತ ಕಟ್ಟಡಗಳನ್ನು ಹೊಂದಿದೆ. ಉತ್ತಮ ಆಡಳಿತ, ಸಿಬ್ಬಂದಿಗಳ ಸೇವೆ, ಸದಸ್ಯರ ಸಹಕಾರದಿಂದ ಇದು ಸಾಧ್ಯವಾಗಿದೆ. ಸತತ 27 ವರ್ಷಗಳಿಂದ ಈ ಸಂಘದ ಅಧ್ಯಕ್ಷರಾಗಿರುವ ಎಸ್. ರಾಜು ಪೂಜಾರಿಯವರ ಶ್ರಮವೂ ಮಹತ್ವದ್ದಾಗಿದೆ ಎಂದರು.

ವಾಣಿಜ್ಯ ಬ್ಯಾಂಕುಗಳಿಂದ ಮಾಡಲಾಗದ ಕೆಲಸ ಇವತ್ತು ಸಹಕಾರ ಕ್ಷೇತ್ರದಿಂದ ಆಗುತ್ತಿದೆ. ಕೊರೋನಾ ಅಥವಾ ಇನ್ನಿತರ ಅವಘಡದಿಂದ ತನ್ನ ಸದಸ್ಯರಿಗೆ ಹಾನಿಯಾದರೆ ಬ್ಯಾಂಕುಗಳಿಂದ ಪರಿಹಾರ ನೀಡಲು ಸ್ವಾತಂತ್ರ್ಯ ಇರುವುದಿಲ್ಲ. ಆದರೆ ಸಹಕಾರ ವ್ಯವಸ್ಥೆಯಲ್ಲಿ ಸಾಧ್ಯವಿದೆ. ಈ ಸೇವಾ ಮನೋಭಾವದಿಂದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳು ಜನಮಾನಸದಲ್ಲಿ ಗಟ್ಟಿಯಾದ ನೆಲೆ ಕಂಡುಕೊಂಡಿವೆ ಎಂದರು.

Click here

Click here

Click here

Click Here

Call us

Call us

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಜನಸಾಮಾನ್ಯರ ನೋವು ಅರ್ಥ ಮಾಡಿಕೊಳ್ಳುವ ಶಕ್ತಿ ಇರುವುದು ಸಹಕಾರ ಕ್ಷೇತ್ರಕ್ಕೆ ಮಾತ್ರ. ಸಹಕಾರ ಸಂಘಗಳ ಅಧ್ಯಕ್ಷರಿಗೆ ಗೌರವಾದರದ ಸ್ಥಾನ ಲಭಿಸಿದೆ. ಡಾ. ಎಂ. ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ಅವಿಭಜಿತ ಜಿಲ್ಲಾ ಸಹಕಾರ ಕ್ಷೇತ್ರ ರಾಷ್ಟ್ರಮಟ್ಟದ ಗಮನ ಸೆಳೆದಿದೆ ಎಂದರು.

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಅವರು ಮಾಜಿ ಶಾಸಕ ಜಿ.ಎಸ್.ಆಚಾರ್ ಗರಡಿಯಲ್ಲಿ ಪಳಗಿದವರು. ನಾನು ಅವರನ್ನು ಆರಂಭದಿಂದಲೇ ಗಮನಿಸುತ್ತಿದ್ದೆ. ಮುಂದೊಂದು ದಿನ ಮಹತ್ವದ ಸ್ಥಾನಕ್ಕೇರುತ್ತಾರೆ ಎನ್ನುವ ನಿರೀಕ್ಷೆ ಇತ್ತು. ರಾಜು ಪೂಜಾರಿಯವರಿಗೆ ಇನ್ನೂ ಉತ್ತಮ ಅವಕಾಶಗಳಿವೆ ಎಂದರು.

ಮಾಜಿ ಶಾಸಕರು, ಸಾಗರ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಬೈಂದೂರು ಅಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ಗೋದಾಮು ಉದ್ಘಾಟಿಸಿದರು.

ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಶುಭಾಶಂಸನೆಗೈದರು. ಮುಖ್ಯ ಅತಿಥಿಗಳಾಗಿ ಮರವಂತೆ ಗ್ರಾ.ಪಂ ಅಧ್ಯಕ್ಷೆ ರುಕ್ಮಿಣಿ, ಕುಂದಾಪುರ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ., ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಮಹೇಶ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ನಿರ್ದೇಶಕರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಯಕ್ಷಗಾನದ ಕಿರೀಟ ತೊಡಿಸಿ ಯಕ್ಷಾಭಿನಂದನೆ ಸಲ್ಲಿಸಲಾಯಿತು. ವಿಶೇಷವಾಗಿ ಎಸ್. ಜನಾರ್ದನ್ ಮರವಂತೆ ರಚಿಸಿದ ರಾಜೇಂದ್ರ ಕುಮಾರ್ ಪರಿಚಯ ಕಾವ್ಯವನ್ನು ಯಕ್ಷಗಾನ ಭಾಗವತಿಕೆಯಲ್ಲಿ ಪ್ರಸಿದ್ಧ ಭಾಗವತ ದೇವರಾಜ ದಾಸ್ ಮರವಂತೆ ತಂಡದವರು ಪ್ರಸ್ತುತ ಪಡಿಸಿದರು.

ಸಮುದಾಯಕ್ಕೆ ಸೇವೆಸಲ್ಲಿಸಿದ ಅನುಪಮ ಸೇವೆ ಪರಿಗಣಿಸಿ ಎಸ್. ಜನಾರ್ದನ್ ಮರವಂತೆ ಅವರನ್ನು ಸನ್ಮಾನಿಸಲಾಯಿತು. ಮರವಂತೆ ಗ್ರಾಮಕ್ಕೆ ಉತ್ತಮ ಸಹಕಾರಿ ಸಂಘದ ಕಟ್ಟಡ ಒದಗಿಸಿಕೊಟ್ಟ ರೂವಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿಯವರನ್ನು ಮರವಂತೆ ಗ್ರಾಮಸ್ಥರು ಸನ್ಮಾನಿಸಿದರು. ಡಾ. ಗಣೇಶ ಗಂಗೊಳ್ಳಿ ಕಾವ್ಯದ ಮೂಲಕ ಪರಿಚಯ ಮಾಡಿದರು.

ಸಂಘದ ವ್ಯಾಪ್ತಿಯಲ್ಲಿ ಕೊರೋನಾದಿಂದ ಮೃತರಾದ 18 ಕುಟುಂಬಗಳಿಗೆ ತಲಾ 10 ಸಾವಿರ ನಗದು ಪರಿಹಾರ ವಿತರಿಸಲಾಯಿತು. ಕ್ಯಾನ್ಸರ್ ಪೀಡಿತರಿಗೆ ಸಂಘದ ವತಿಯಿಂದ ವೈದ್ಯಕೀಯ ನೆರವು ನೀಡಲಾಯಿತು. ಸಂಘದ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.

ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಅಕಾಶವಾಣಿ ಕಲಾವಿದ ಗಣೇಶ ಗಂಗೊಳ್ಳಿ ರೈತಗೀತೆ ಹಾಡಿದರು. ನಾಮ ನಿರ್ದೇಶಿತ ನಿರ್ದೇಶಕ ಎಂ. ವಿನಾಯಕ ರಾವ್ ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

Leave a Reply