ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಕಾಲೇಜು ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆಸಲಾದ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯ ಗಣಿತಶಾಸ್ತ್ರ ವಿಭಾಗದಲ್ಲಿ ಕೋಟೇಶ್ವರದ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಶ್ರುತಿ ಇವರು ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಈ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಸರಕಾರಿ ಕಾಲೇಜಿನ ಏಕೈಕ ವಿದ್ಯಾರ್ಥಿನಿಯಾಗಿದ್ದಾರೆ. ಉಪನ್ಯಾಸಕರಾದ ಡಾ.ಶ್ರೀಮತಿ ಅಡಿಗ ಮಾರ್ಗದರ್ಶನ ಮಾಡಿ ಸಹಕರಿಸಿದ್ದರು.