ಕಾರಂತ ಥೀಮ್ ಪಾರ್ಕ್‌ಗೆ ಸಾತ್ಯಕಿ ಸಾವರ್ಕರ್ ಭೇಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:
ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಸ್ವಾತಂತ್ರ್ಯ ಹೋರಾಟಗಾರ ವೀರಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಭೇಟಿ ನೀಡಿದರು.

Call us

Click Here

ಥೀಮ್ ಪಾರ್ಕ್ ಕೆರೆಯ ಮಧ್ಯದಲ್ಲಿರುವ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಭಾಷೆಗಳನ್ನು ಶ್ರೀಮಂತಗೊಳಿಸುವಲ್ಲಿ ಕವಿಗಳ ಪಾತ್ರ ಅಮೋಘವಾದದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ|| ಶಿವರಾಮ ಕಾರಂತರ ನೆನಪಿನಲ್ಲಿ ಈ ಥೀಮ್ ಪಾರ್ಕ್ ನಿರ್ಮಾಣ ಶ್ಲಾಘನೀಯ, ಕಾರಂತರ ಸಾಧನೆಗಳು ಮುಂದಿನ ಜನಾಂಗಕ್ಕೆ ತಲುಪುವಂತಾಗಲಿ ಎಂದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಟ್ರಸ್ಟಿ ಸುಬ್ರಾಯ್ ಆಚಾರ್ಯ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು, ಪ್ರಕಾಶ್ ಮಲ್ಪೆ ಉಪಸ್ಥಿತರಿದ್ದರು.

Leave a Reply