ಗಂಗೊಳ್ಳಿ: ಎಸ್.ಕೆ.ಡಿ.ಆರ್.ಡಿ.ಪಿ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಕಳೆದ ಕೆಲವು ವರ್ಷಗಳ ಹಿಂದೆ ಸರಕಾರಿ ಸೌಲಭ್ಯ, ಪ್ರಯೋಜನಗಳನ್ನು ಪಡೆದುಕೊಳ್ಳಲು ಜನಸಾಮಾನ್ಯರು ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದ್ದು, ಇಂದು ಸರಕಾರ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಜನಸಾಮಾನ್ಯರಿಗೆ ಸರಕಾರಿ ಸೇವೆ ಒದಗಿಸುವ ಪ್ರಯತ್ನ ಮಾಡುತ್ತಿದೆ. ಜನರು ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಡಿಜಿಟಲ್ ಸೇವಾ ಕೇಂದ್ರಗಳ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿತ್ವದ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಿಜಿಟಲ್ ಸೇವಾ ಕೇಂದ್ರಗಳು ಕಾರ್ಯಾಚರಿಸುತ್ತಿದೆ ಎಂದು ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು.

Call us

Click Here

ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ಸಮೀಪದ ಕಟ್ಟಡದಲ್ಲಿ ಗುರುವಾರ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಂದರು ಒಕ್ಕೂಟದ ಅಧ್ಯಕ್ಷೆ ಲಕ್ಷ್ಮೀ, ಒಕ್ಕೂಟದ ಪದಾಧಿಕಾರಿಗಳಾದ ಸುಜಾತಾ, ಸ್ವಾತಿ ಮಡಿವಾಳ, ಶೋಭಾ, ಮಹೇಶ ಶೇಟ್, ವಿಎಲ್ಇ ದಿವ್ಯಾ, ಮತ್ತಿತರರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ರತ್ನಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸೇವಾ ಪ್ರತಿನಿಧಿ ಸರಸ್ವತಿ ವಂದಿಸಿದರು.

Leave a Reply