Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ
    ಉಡುಪಿ ಜಿಲ್ಲೆ

    ಕರ್ನಾಟಕದ ಶಾಲಾ- ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಸರ್ಕಾರದಿಂದ ಆದೇಶ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು:
    ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದುದ ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

    Click Here

    Call us

    Click Here

    ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್​. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಎಲ್ಲ ಶಾಲಾ- ಕಾಲೇಜುಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

    ಖಾಸಗಿ ಶಾಲೆಗಳು ತಮ್ಮ ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರವನ್ನೇ ಧರಿಸಬೇಕು. ಹಿಜಾಬ್​ ವಿವಾದದ ಬೆನ್ನಲ್ಲೇ ಸಮವಸ್ತ್ರ ಕುರಿತು ಆದೇಶ ಹೊರಡಿಸಲಾಗಿದೆ. ಆಯಾ ಶಾಲೆಗಳು ನಿಗದಿಪಡಿಸಿರುವ ಸಮವಸ್ತ್ರವೇ ಕಡ್ಡಾಯವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರವನ್ನು ಕಡ್ಡಾಯಗೊಳಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳ ನಿರ್ಧಾರವೇ ಅಂತಿಮವಾಗಿದೆ. ಹಿಜಾಬ್​, ಕೇಸರಿ ಶಾಲು ಜಟಾಪಟಿಗೆ ಬ್ರೇಕ್​ಗೆ ಪ್ರಯತ್ನ ಮಾಡಲಾಗಿದೆ.

    ಕರ್ನಾಟಕದಲ್ಲಿ ಸರ್ಕಾರ ಏಕರೂಪದ ಸಮವಸ್ತ್ರವನ್ನು ಜಾರಿಗೊಳಿಸಿದೆ. ಶಾಲಾ-ಕಾಲೇಜಿನಲ್ಲಿ ಏಕರೂಪದ ಸಮವಸ್ತ್ರ ಫಿಕ್ಸ್​ ಮಾಡಲಾಗಿದೆ. ಪಿಯು ಕಾಲೇಜುಗಳಲ್ಲಿ ನಿಗದಿಪಡಿಸಿದ ಸಮವಸ್ತ್ರವೇ ಅಂತಿಮವಾಗಿದೆ. ಕಾಲೇಜು ಅಭಿವೃದ್ಧಿ ಸಮಿತಿ ನಿರ್ಧರಿಸಿರುವ ಯೂನಿಫಾರ್ಮ್​ ಧರಿಸುವುದು ಕಡ್ಡಾಯವಾಗಿದೆ. ಕಾಲೇಜು ಸಮವಸ್ತ್ರ ನಿಗದಿಪಡಿಸದಿದ್ದರೆ ಸಮರ್ಪಕ ಉಡುಪು ಧರಿಸಬೇಕು. ಸಮಾನತೆ, ಐಕ್ಯತೆ ಜೊತೆ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸುವುದು ಕಡ್ಡಾಯವಾಗಿದೆ.

    ಪದವಿ ಪೂರ್ವ ಕಾಲೇಜುಗಳಿಗೂ ಕಡ್ಡಾಯ ಸಮವಸ್ತ್ರವನ್ನು ಸರ್ಕಾರ ನಿಗದಿಪಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ 1983 ರ ಅನ್ವಯ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಖಾಸಗಿ ಶಾಲೆಗಳು ಆಡಳಿತ ಮಂಡಳಿ ನಿರ್ಧರಿಸಿರುವಂತಹ ಸಮವಸ್ತ್ರ ಧರಿಸಬೇಕು. ಪದವಿ ಪೂರ್ವ ಕಾಲೇಜುಗಳಲ್ಲಿ CDC ಅಥವಾ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಕಾಲೇಜುಗಳಲ್ಲಿ CDC ಅಥವಾ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದಿದ್ದರೆ ಸಮಾನತೆ ಹಾಗೂ ಐಕ್ಯತೆಯನ್ನು ಕಾಪಾಡಿಕೊಂಡು ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಂತೆ ಇರುವ ಉಡುಪು ಧರಿಸಬೇಕೆಂದು ಆದೇಶಿಸಲಾಗಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.