ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತ್ತಿಚಿಗೆ ಮೂಡುಬಿದಿರೆಯಲ್ಲಿ ನಡೆದ 6ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಕಟಾ ವಿಭಾಗದಲ್ಲಿ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ತೇಜಸ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪ್ರಸ್ತುತ 4ನೇ ತರಗತಿಯಲ್ಲಿ ಕಲಿಯುತ್ತಿರುವ ತೇಜಸ್ ಕುಮಾರ್, ಈ ಹಿಂದೆ ಬೆಳ್ತಂಗಡಿಯಲ್ಲಿ ನಡೆದ 18ನೇ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್-2021ರಲ್ಲಿ 10 ವರ್ಷದ ಒಳಗಿನ ಕಟಾದಲ್ಲಿ ಬೆಳ್ಳಿ ಪದಕ ಮತ್ತು ಕಮೇಟಿಯಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದುಕೊಂಡಿದ್ದು, ಶಾಲಾ ಶಿಕ್ಷಕರು ಅಭಿನಂದಿಸಿದ್ದಾರೆ.