ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ರೋಟರಿ ಕ್ಲಬ್ ಗಂಗೊಳ್ಳಿ ಪೊಲೀಸ್ ಠಾಣೆಗೆ ಕಂಪ್ಯೂಟರ್ ಕೊಡುಗೆಯಾಗಿ ನೀಡಲಾಯಿತು.
ಗುರುವಾರ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕ ನಂಜಾ ನಾಯ್ಕ್ ಅವರಿಗೆ ಕಂಪ್ಯೂಟರ್ ಹಸ್ತಾಂತರಿಸಿ ಮಾತನಾಡಿದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ., ತ್ವರಿತ ಹಾಗೂ ಸ್ನೇಹ ಪರವಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವ ಗಂಗೊಳ್ಳಿ ಠಾಣೆಯ ಅಗತ್ಯತೆಯನ್ನು ಮನಗಂಡು ರೋಟರಿ ಕ್ಲಬ್ ವತಿಯಿಂದ ಈ ಕೊಡುಗೆಯನ್ನು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ರೋಟರಿ ಜಿಲ್ಲೆ ೩೧೮೨ರ ಝೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ರೋಟರಿ ಸದಸ್ಯರಾದ ಲಿಫ್ಟನ್ ಒಲಿವೇರಾ, ಪ್ರವೀಣ್, ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.