ಫೆ.19ಕ್ಕೆ ಕುಂದಾಪುರ ನೂತನ ನ್ಯಾಯಾಲಯ ಕಟ್ಟಡ ಮತ್ತು ವಕೀಲರ ಸಂಘದ ಕಟ್ಟಡ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ನೂತನ ನ್ಯಾಯಾಲಯ ಕಟ್ಟಡ ಮತ್ತು ವಕೀಲರ ಸಂಘದ ಕಟ್ಟಡ ಶನಿವಾರ ಮಧ್ಯಾನ್ನ 2ಕ್ಕೆ ಸರ್ವೋಚ್ಚ ನ್ಯಾಯಾಲಯ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಉದ್ಘಾಟಿಸಲಿದ್ದಾರೆ ಎಂದು ಬಾರ್ ಅಸೋಸಿಯೇಷನ್ ಅಧ್ಯಕ್ಷ ನಿರಂಜನ್ ಹೆಗ್ಡೆ ಸಳ್ವಾಡಿ ಹೇಳಿದರು.

Call us

Click Here

ವಕೀಲರ ಸಂಘದ ಕಾರ್ಯದರ್ಶಿ ಎಚ್. ಪ್ರಮೋದ್ ಹಂದೆ ಮಾತನಾಡಿ, ನೂತನ ನ್ಯಾಯಾಲಯ ಕಟ್ಟಡ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ವಹಿಸಲಿದ್ದಾರೆ. ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ರಂಗಸ್ವಾಮಿ ನಟರಾಜ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾದುಸ್ವಾಮಿ, ಲೋಕೋಪಯೋಗಿ ಇಲಾಖಾ ಸಚಿವ ಸಿ ಸಿ ಪಾಟೀಲ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜ್ಯ ಉಚ್ಚ ನ್ಯಾಯಾಲಯದ ಮಹಾ ವಿಲೇಖನಾಧಿಕಾರಿ ಟಿ ಜಿ ಶಿವಶಂಕರೇ ಗೌಡ ಮತ್ತು ಕಾನೂನು ಇಲಾಖಾ ಪ್ರಧಾನ ಕಾರ್ಯದರ್ಶಿ ಟಿ ವೆಂಕಟೇಶ್ ನಾಯ್ಕ್ ಆಗಮಿಸಲಿದ್ದಾರೆ ಎಂದರು.

ವಕೀಲರ ಸಂಘದ ಪೂರ್ವಾಧ್ಯಕ್ಷ ಕಾಳಾವರ ಉದಯ ಶೆಟ್ಟಿ, ಸದಸ್ಯರಾದ ಗಿಳಿಯಾರು ರಾಮಣ್ಣ ಶೆಟ್ಟಿ, ಕೊತ್ತಾಡಿ ರಾಧಾಕೃಷ್ಣ ಶೆಟ್ಟಿ, ರಾಮದಾಸ್ ನಾಯಕ್, ಟಿ ಬಿ ಶೆಟ್ಟಿ, ಕೈಲಾಡಿ ಬಾಲಕೃಷ್ಣ ಶೆಟ್ಟಿ ನೂತನ ಕಟ್ಟಡ ನಿರ್ಮಾಣ ಗುತ್ತಿಗೆದಾರ ಪ್ರಶಾಂತ್ ಕಟ್ಟಡದಲ್ಲಿ ಉಪಸ್ಥಿತರಿದ್ದರು.

21 ಸಾವಿರ ಚದರಡಿ ವಿಸ್ತೀರ್ಣ ಕಟ್ಟಡ ನೆಲ ಅಂತಸ್ತು ಮತ್ತು ಎರಡು ಮಹಡಿಗಳನ್ನು ಹೊಂದಿದೆ. ಕೋರ್ಟ್ ಹಾಲ್, ನ್ಯಾಯಾಧೀಶರ ಚೇಂಬರ್‌ಗಳು, ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಪುರುಷ ಮತ್ತು ಮಹಿಳಾ ವಕೀಲರ ಕೊಠಡಿಗಳನ್ನು ಹೊಂದಿದೆ. ಲಿಫ್ಟ್ ವ್ಯವಸ್ಥೆಯಿದೆ. ಆರು ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ.

Leave a Reply