ಹಿಜಾಬ್ –ಕೇಸರಿ ಶಾಲು ವಿವಾದ ಹಿನ್ನೆಲೆ: ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ.22:
ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ – ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಫೆ. 24 ರ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 5 ರ ಸಂಜೆ 6 ಗಂಟೆಯವರೆಗೆ (ಫೆ. 27 ಭಾನುವಾರ ಹಾಗೂ ಮಾರ್ಚ್ 1 ರಂದು ಮಹಾಶಿವರಾತ್ರಿ ಪ್ರಯುಕ್ತ ರಜೆ ಇದ್ದು, ಈ ಎರಡು ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಕಲಂ 144 ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.

Call us

Click Here

ಈ ಅವಧಿಯಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದು, ಯಾವುದೇ ವ್ಯಕ್ತಿಯ ಜಾತಿ, ಧರ್ಮ, ಕೋಮು, ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು, ಸರ್ಕಾರಿ ಸಂಸ್ಥೆ, ಸಂಘಟನೆ ಹಾಗೂ ಕಾರ್ಯನಿರತ ಅಧಿಕಾರಿ, ಸಿಬ್ಬಂಧಿಗಳ ವಿರುದ್ಧ ನಿಂಧಿಸುವAತಹ, ಅವಹೇಳನಕಾರಿಯಂತಹ ಘೋಷಣೆ, ಅವಾಚ್ಯ ಶಬ್ಧಗಳ ಬಳಕೆ, ಪ್ರಚೋದನಾಕಾರಿ ಭಾಷಣ ಇತ್ಯಾದಿ ಚಟುವಟಿಕೆಗಳನ್ನು, ಶಸ್ತಾçಸ್ತç, ದೊಣ್ಣೆ, ಕತ್ತಿ, ಈಟಿ, ಬಂದೂಕು, ಚಾಕು, ಲಾಠಿ ಅಥವಾ ದೈಹಿಕ ಹಿಂಸೆಯನ್ನುAಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದು, ಪಟಾಕಿ ಸಿಡಿಸುವುದು, ಸ್ಪೋಟಕಗಳನ್ನು ಒಯ್ಯುವುದು, ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಸಾರ್ವಜನಿಕ ಹಾಗೂ ರಾಜಕೀಯ ಸಭೆ ಸಮಾರಂಭ ನಡೆಸುವುದು, ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದು, ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದು, ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಆವೇಶಭರಿತ ಭಾಷಣ ಮಾಡುವುದು, ಭಿತ್ತಿ ಪತ್ರಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply