ಮೀನುಗಾರರಿಗೆ ಸಹಾಯಧನ: ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ.23:
ಮೀನುಗಾರಿಕೆ ಇಲಾಖೆಯ ವತಿಯಿಂದ ಡೀಸೆಲ್ ಮಾರಾಟ ತೆರಿಗೆ ಮರುಪಾವತಿ, ಕೇಂದ್ರ ಪುರಸ್ಕೃತ ಉಳಿತಾಯ ಪರಿಹಾರ ಯೋಜನೆ ಹಾಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೋವಿಡ್ ಪರಿಹಾರವನ್ನು ಡಿ.ಬಿ.ಟಿ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಂತ್ರಾಂಶದಲ್ಲಿ ಫಲಾನುಭವಿಯ ಆಧಾರ್ ಸಂಖ್ಯೆಯೊಂದಿಗೆ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ಪಾವತಿಸಲು ಕ್ರಮವಹಿಸಲಾಗಿರುತ್ತದೆ.

Call us

Click Here

ಈ ಮೇಲ್ಕಂಡ ಯೋಜನೆಗಳಲ್ಲಿ ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ, ಸಹಾಯಧನ ಪಡೆಯಲು ಬಾಕಿಯಿರುವ ಫಲಾನುಭವಿಗಳು ವಾರಾಂತ್ಯದೊಳಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಜೋಡಣೆ ಮಾಡಲು ಶೀಘ್ರವಾಗಿ ಕ್ರಮವಹಿಸಬೇಕು. ಆಧಾರ್ ಸಂಖ್ಯೆ ಜೋಡಣೆಯಾಗದೇ ಸಹಾಯಧನ ಪಾವತಿಯಾಗದಿದ್ದರೆ ಇಲಾಖೆ ಜವಾಬ್ದಾರರಾಗಿರುವುದಿಲ್ಲ ಎಂದು ಮೀನುಗಾರಿಕೆಯ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply