ಬೈಂದೂರು ವಲಯ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಗಾರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು ಇದರ ಬೈಂದೂರು ವಲಯ ಘಟಕ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವತಿಯಿಂದ ಚಿತ್ತೂರು ಸ.ಹಿ. ಪ್ರಾ ಶಾಲೆಯಲ್ಲಿ ಬೈಂದೂರು ವಲಯ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

Call us

Click Here

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಡಾ. ಅತುಲ್ ಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬೈಂದೂರು ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಚಿತ್ತೂರು ಗ್ರಾ.ಪಂ. ಅಧ್ಯಕ್ಷೆ ಜಯಂತಿ ಪೂಜಾರಿ, ಉದ್ಯಮಿ ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ, ಸ್ಥಳೀಯ ವೈದ್ಯ ಡಾ. ರಾಜೇಶ್ ಬಾಯರಿ, ಚಿತ್ತೂರು ಗ್ರಾ.ಪಂ.ಸದಸ್ಯ ರವೀಂದ್ರ ಶೆಟ್ಟಿ, ಸ. ಹಿ. ಪ್ರಾ ಶಾಲೆ ಚಿತ್ತೂರಿನ ಎಸ್.ಡಿ.ಎಂ.ಸಿ ಅಧ್ಯಕ್ಷ ದಿವಾಕರ ಆಚಾರ್ಯ, ಭಟ್ಕಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಸಿ.ಆರ್. ಪಿ ನಾಗರಾಜ ಶೆಟ್ಟಿ,ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಪ್ರಭಾಕರ ಎಸ್, ಸಂಘದ ಗೌರವಾಧ್ಯಕ್ಷ ರಾಜೀವ ಶೆಟ್ಟಿ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಸಚಿನ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ರವೀಂದ್ರನಾಥ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಂಗಳೂರು ಇದರ ಕ್ಯಾಲೆಂಡರನ್ನು ಬಿಡುಗಡೆಗೊಳಿಸಲಾಯಿತು. ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಪ್ರಸ್ತಾವನೆಗೈದರು. ಸಂತೋಷ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸತೀಶ್ ಖಾರ್ವಿ ವಂದಿಸಿದರು.

ವೈದ್ಯರಾದ ಡಾ. ಅತುಲ್ ಕುಮಾರ್ ಶೆಟ್ಟಿ ಹಾಗೂ ಡಾ. ರಾಜೇಶ್ ಬಾಯರಿ ಇವರಿಂದ ಪ್ರಥಮ ಚಿಕಿತ್ಸೆ, ಮಾನಸಿಕ ಸ್ಥೈರ್ಯ ಹಾಗೂ ನ್ಯೂಟ್ರಿಷನ್ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.

Leave a Reply