ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಡಾಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಜರುಗಿತು.
ವಿಜ್ಞಾನ ವಸ್ತು ಪ್ರದರ್ಶನ ಮೇಳ ಉದ್ಘಾಟನೆ ಮಾಡಿ ಜಿಲ್ಲಾ ವಿಜ್ಞಾನ ಪರಿಷತ್ತು ಅಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಮಾತನಾಡಿ, ಮೂಢನಂಬಿಕೆ ಮರೆತು ವಿಜ್ಞಾನ ಅರಿತು, ವಿದ್ಯಾರ್ಥಿಗಳು ಹೊಸ ಹೊಸ ಜ್ಞಾನವನ್ನು ಕಲಿಯುತ್ತ ವಿದ್ಯಾಭ್ಯಾಸ ಮಾಡಬೇಕಿದೆ. ಆ ಮಟ್ಟಿಗೆ ಬಡಾಕೆರೆ ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿದೆ. ಅಧ್ಯಾಪಕರು ಮಕ್ಕಳ ಕಾರ್ಯ ಶ್ಲಾಘನೀಯ ಎಂದು ಎಂದರು.
ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಶ್ರೀಧರ ದೇವಾಡಿಗ ಇವರ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಬಹುಮಾನವನ್ನು ನಾಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಶೆಟ್ಟಿ ವಿತರಿಸಿದರು. ಸಿ ಆರ್ ಪಿ ನಾಗರಾಜ ಬಂಗ್ಲೆ ಹಾಗೂ ಉಪಾಧ್ಯಕ್ಷೆ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂದರ್ಭೋಚಿತ ಮಾತನಾಡಿದರು. ಇಕೋ ಕ್ಲಬ್ ರಸಪ್ರಶ್ನೆ ವಿಜೇತರಿಗೆ ಬಹುಮಾನ, ವಿಜ್ಞಾನ ಮತ್ತು ರಂಗೋಲಿ ವಿಜೇತರಿಗೆ ಬಹುಮಾನ ಹಾಗೂ ಕಾಂಪೋಸ್ಟ್ ಕಿಟ್ ಸಭೆಯಲ್ಲಿ ವಿತರಿಸಲಾಯಿತು.
ಮುಖ್ಯೋಪಾಧ್ಯಾಯರಾದ ಮಹಾಬಲ ಕೆ. ಪ್ರಾಸ್ತಾವಿಕ ಭಾಷಣ ಮಾಡಿದರು. ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಲಕ್ಷ್ಮೀ ಕೆ ಎ ಕಾರ್ಯಕ್ರಮ ನಿರೂಪಿಸಿ, ಸರೋಜ ಸ್ವಾಗತಿಸಿದರು. ಜಯಲಕ್ಷ್ಮೀ ವಿಜ್ಞಾನ ವಸ್ತು ಪ್ರದರ್ಶನ ಮೇಳ ನಡೆಸಿಕೊಟ್ಟರು. ರಶ್ಮಿ ವಂದಿಸಿ, ಬಹುಮಾನಿತರ ಪಟ್ಟಿ ವಾಚಿಸಿದರು.