ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸ್ವಾವಲಂಭನೆಯ ಬದುಕು ರೂಪಿಸುವ ಜೊತೆಗೆ ಜನರಲ್ಲಿ ಉಳಿತಾಯದ ಮನೋಭಾವನೆ ಹೆಚ್ಚಿಸುವ ಉದ್ದೇಶದೊಂದಿಗೆ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.
ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಾವುಂದ ಶಾಖೆ ನಾಲ್ಕು ವರ್ಷ ಪೂರೈಸಿದ ಅಂಗವಾಗಿ ನಾವುಂದ ಸ್ಕಂದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರ ವಿಶ್ವಾಸದೊಂದಿಗೆ ನಮ್ಮ ಸಂಸ್ಥೆ ಉತ್ತಮ ಆರ್ಥಿಕ ವ್ಯವಹಾರ ಹೊಂದಿರುವುದಲ್ಲದೇ ಪರಿಸರದ ವಿವಿಧ ಅಗತ್ಯತೆಗಳಿಗೆ ನೆರವಾಗುವ ಮೂಲಕ ಸಾಮಾಜಿಕ ಬದ್ಧತೆಯನ್ನು ಪಾಲಿಸಿಕೊಂಡು ಬಂದಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಉಪಸ್ಥಿತರಿದ್ದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿ, ಶಾಖಾ ಪ್ರಬಂಧಕ ಶ್ರೀನಿವಾಸ್ ಎಂ. ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಗೋಳಿಹೊಳೆ ಶಾಖಾ ಪ್ರಬಂಧಕ ರಾಘವೇಂದ್ರ ಸಹಕರಿಸಿದರು. ಅದೃಷ್ಟಶಾಲಿ ಗ್ರಾಹಕರಿಗೆ ಹಾಗೂ ಗುಂಪಿಗೆ ಬಹುಮಾನಗಳನ್ನು ವಿತರಿಸಲಾಯಿತು.