ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗಳು ಸಾವಿರಾರು ಕುಟುಂಬಗಳಿಗೆ ಬೆಳಕಾಗಿದೆ. ಸದಾ ಮನೆ ಕೆಲಸಗಳಲ್ಲಿ ತಲ್ಲೀನರಾಗಿರುತ್ತಿದ್ದ ಸ್ವಸಹಾಯ ಸಂಘದ ಮಹಿಳಾ ಸದಸ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡಿರುವುದು ಹಾಗೂ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗಾಗಿ ಕ್ರೀಡಾಕೂಟವನ್ನು ಆಯೋಜಿಸಿರುವುದು ಸ್ತುತ್ಯಾರ್ಹವಾದುದು ಎಂದು ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗೌರವಾಧ್ಯಕ್ಷ ಉಮೇಶ ಮೇಸ್ತ ಹೇಳಿದರು.
ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಸದಸ್ಯರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಎಚ್.ರಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ., ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಶುಭ ಹಾರೈಸಿದರು. ಜನಜಾಗೃತಿ ವೇದಿಕೆ ಸದಸ್ಯರಾದ ಬಿ.ರಾಘವೇಂದ್ರ ಪೈ, ಶೇಖರ ಪೂಜಾರಿ ವಾಸುದೇವ ಆಚಾರಿ, ಸ್ವಸಹಾಯ ಸಂಘದ ತ್ರಾಸಿ ವಲಯಾಧ್ಯಕ್ಷ ನಾಗರಾಜ ಖಾರ್ವಿ, ತಾಪಂ ಮಾಜಿ ಸದಸ್ಯ ನಾರಾಯಣ ಕೆ.ಗುಜ್ಜಾಡಿ, ಶಾಲಾ ಮುಖ್ಯೋಪಾಧ್ಯಾಯ ಆನಂದ ಜಿ., ತೀರ್ಪುಗಾರರಾದ ಅಕ್ಷತಾ ವಿನಯ್, ಲಾವಣ್ಯ, ರಾಜು, ಸಂತೋಷ ಮೊದಲಾದವರು ಉಪಸ್ಥಿತರಿದ್ದರು.
ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಗೀತಾ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.