ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಆನಂದ ಬಿಲ್ಲವ ಮತ್ತು ಉಪಾಧ್ಯಕ್ಷರಾಗಿ ವಾಸುದೇವ ಶೇರುಗಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ನೇತೃತ್ವದಲ್ಲಿ ಸಹಕಾರಿಯ ಗಂಗೊಳ್ಳಿ ಪ್ರಧಾನ ಕಛೇರಿಯಲ್ಲಿ ಶುಕ್ರವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ಆನಂದ ಬಿಲ್ಲವ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ವಾಸುದೇವ ಶೇರುಗಾರ್ ನಾಮಪತ್ರ ಸಲ್ಲಿಸಿದ್ದರಿಂದ ಇವರಿಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯಿತು.
ನಿರ್ದೇಶಕರಾದ ಶ್ರೀನಿವಾಸ ಜತ್ತನ್, ಮಾಧವ ಖಾರ್ವಿ, ಸುಭಾಶ್ಚಂದ್ರ ಪೂಜಾರಿ, ಗೋಪಾಲ ನಾಯ್ಕ್, ಚಂದ್ರಶೇಖರ ಪೂಜಾರಿ, ಪ್ರೇಮಾ ಪೂಜಾರಿ, ಯಮುನಾ, ಚಂದ್ರಮತಿ ಡಿ.ಹೆಗ್ಡೆ, ನಾಗರಾಜ ಎಂ., ಲಕ್ಷ್ಮಣ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ಉಪಸ್ಥಿತರಿದ್ದರು.