ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾವಿನಕಟ್ಟೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಕಲಿತ 2005-06ನೇ ಸಾಲಿನ ವಿದ್ಯಾರ್ಥಿಗಳು ಸುಮಾರು 1 ಲಕ್ಷ ಮೊತ್ತದ ಸೌಂಡ್ ಸಿಸ್ಟಮ್ ಹಾಗೂ ವಾಟರ್ ಫ್ಯೂರಿಫೈ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಶಾಲೆಗೆ ಹಸ್ತಾಂತರಿಸಿದರು.
ಈ ಸಂದರ್ಭ ಶಾಲೆಯ ಮುಖ್ಯ ಶಿಕ್ಷಕ ಎಚ್. ಕುಶಲ್ ಶೆಟ್ಟಿ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಡಾ. ಅತುಲ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿಗಳು, ಶಾಲಾ ಅದ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಕುಮಾರ್ ಶೆಟ್ಟಿ ಸ್ವಾಗತಿಸಿ ಧನ್ಯವಾದಗೈದರು.











