ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾಟಕದ ಪಾತ್ರಗಳೇ ನಿಜ. ನಮ್ಮ ಬದುಕೇ ನಾಟಕೀಯವಾಗಿದೆ ಎಂದೆನಿಸುವ ಮಟ್ಟಿಗೆ ಇಂದಿನ ಬದುಕು ಬದಲಾಗಿದೆ. ನಾಟಕದ ಪಾತ್ರಗಳಿಂದ ನಾವು ಕಲಿತು ಅಳವಡಿಸಿಕೊಳ್ಳುವುದು ಸಾಕಷ್ಟಿದೆ ಎಂದು ಬೈಂದೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನಿಯೋಜಿತ ಅಧ್ಯಕ್ಷ ಡಾ. ರಘು ನಾಯ್ಕ್ ಹೇಳಿದರು.
ಅವರು ಇಲ್ಲಿನ ರೋಟರಿ ಭವನದಲ್ಲಿ ಸೋಮವಾರ ಸುರಭಿ ರಿ. ಬೈಂದೂರು ಸಂಸ್ಥೆ ಮಾ.25 ರಿಂದ 28ರ ತನಕ ಆಯೋಜಿಸಿರುವ ನಾಲ್ಕು ದಿನಗಳ ರಾಜ್ಯಮಟ್ಟದ ನಾಟಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ನಾಟಕೋತ್ಸವ ಜೀವನ ಪಾಠ ಕಲಿಸಲೊಂದು ದಾರಿಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭಹಾರೈಸಿದರು.
ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಬ್ದುಲ್ ರವೂಫ್ ಉಪಸ್ಥಿತರಿದ್ದರು.
ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಸುಧಾಕರ ಪಿ. ಬೈಂದೂರು ಸಹಕರಿಸಿದರು.