ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ರಾಗಿಣಿ ಅವರು ನೇಮಕಗೊಂಡಿದ್ದಾರೆ.
ರಾಗಿಣಿ ಅವರು ಜೀವಶಾಸ್ತ್ರ ವಿಭಾಗದಲ್ಲಿ 17 ವರ್ಷಗಳ ಅನುಭವವನ್ನು ಹೊಂದಿದ್ದು, ಸಿಇಟಿ/ನೀಟ್ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಕುಂದಾಪುರ ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ, ಅವರ ಸಮ್ಮುಖದಲ್ಲಿ ಪ್ರಭಾರ ಪ್ರಾಂಶುಪಾಲರಾದ ಮಮತಾ ರೈ ಇವರಿಂದ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ವೃಂದದವರು ಶುಭ ಹಾರೈಸಿದರು.










