ಕೊಲ್ಲೂರು: ವಾರ್ಷಿಕ ಮನ್ಮಹಾರಥೋತ್ಸವ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವ ಶುಕ್ರವಾರ ವೈಭವದಿಂದ ಸಂಪನ್ನಗೊಂಡಿತು. ಶ್ರೀದೇವಿಯ ವಿಜೃಂಭಣೆಯ ಉತ್ಸವಕ್ಕೆ ವಿವಿಧೆಡೆಗಳಿಂದ ತೆರಳಿದ್ದ ಸಾವಿರಾರು ಭಕ್ತರು ಸಾಕ್ಷಿಯಾದರು.

Call us

Click Here

ದೇವಳದಲ್ಲಿ ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ ಕೊಲ್ಲೂರಿನ ರಥೋತ್ಸವದ ಪರಂಪರೆಯಂತೆ ಜೋಡಿ (ಎರಡು) ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥೋತ್ಸವ ನಡೆಸಲಾಯಿತು. ಬೀದಿ ಗಣಪತಿ ದೇವಸ್ಥಾನದವರೆಗೆ ರಥವನ್ನು ಎಳೆದು ರಥೋತ್ಸವ ನಡೆಸಲಾಯಿತು. ತೇರಿನ ಈ ವೈಭವವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು. ಸಂಜೆಯ ಬಳಿಕ ಬ್ರಹ್ಮರಥವನ್ನು ಶಂಕರಾಶ್ರಮದವರೆಗೆ ಕೊಂಡೊಯ್ಯಲಾಗುತ್ತದೆ.

ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ನಡೆದವು. ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್. ಪಿ. ಬಿ. ಮಹೇಶ್, ಎಇಒ ಗೋವಿಂದ ನಾಯಕ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಬೆಳ್ವೆ ಗಣೇಶ ಕಿಣಿ, ಕೆ. ಪಿ. ಶೇಖರ್, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply