ಮಚ್ಚಟ್ಟು ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗಳಿಬ್ಬರು ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಚ್ಚಟ್ಟು ಕಳೀನಜೆಡ್ಡು ಎಂಬಲ್ಲಿ ನಡೆದಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಮೃತಪಟ್ಟಿದ್ದಾರೆ.

Call us

Click Here

ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಗುರುವಾರ ಮಧ್ಯಾಹ್ನದ ವೇಳೆಗೆ ಮಚ್ಚಟ್ಟು ಕಳೀನಜೆಡ್ಡು ಹೊಳೆಗೆ ತೆರಳಿ ಸ್ನಾನಕ್ಕೆಂದು ಹೊಳೆಗೆ ಇಳಿದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆನ್ನಲಾಗಿದೆ. ಇದನ್ನು ಗಮನಿಸಿದ ವ್ಯಕ್ತಿಯೊರ್ವರು ಕೂಡಲೇ ಸ್ಥಳೀಯರಿಗೆ ಮಾಹಿತಿ ನೀಡಿದರು. ಸ್ಥಳೀಯರು ರಕ್ಷಿಸಲು ಮುಂದಾದರೂ‌ ಫಲಕಾರಿಯಾಗದೇ ಇಬ್ಬರು ಯುವಕರು ನೀರಿನಲ್ಲಿ‌ ಮುಳುಗಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಅಮಾಸೆಬೈಲು ಠಾಣಾ ಪಿಎಸ್ಐ ಸುಬ್ಬಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply