ಗಂಗೊಳ್ಳಿ: ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವನ ಸಜೀವ ದಹನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಗಂಗೊಳ್ಳಿಯಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ವ್ಯಕ್ತಿಯೋರ್ವರು ಸಜೀವ ದಹನವಾದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಗಂಗೊಳ್ಳಿ ದೊಡ್ಡಹಿತ್ಲು ನಿವಾಸಿ ಗಣೇಶ್ ಖಾರ್ವಿ (42) ಮೃತ ದುರ್ದೈವಿ.

Call us

Click Here

ಮೀನುಗಾರಿಕೆ ಬೋಟಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಗಣೇಶ ಖಾರ್ವಿ ಅವರು, ಬೆಳಿಗ್ಗೆ ಗಂಗೊಳ್ಳಿ ಬಂದರಿನಲ್ಲಿರುವ ಬೋಟಿನ ಬಳಿ ತೆರಳಿ ಮತ್ತೆ ಮನೆಯಲ್ಲಿ ಬಂದು ಮಲಗಿದ್ದರು. ಬೆಳಿಗ್ಗೆ ಸುಮಾರು 8:30ರ ಹೊತ್ತಿಗೆ ಮನೆಯಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಗಣೇಶ ಖಾರ್ವಿ ಮಂಚದ ಮೇಲೆ ಮಲಗಿದ್ದಲ್ಲೆ ಸುಟ್ಟು ಸಜೀವ ದಹನಗೊಂಡಿದ್ದಾರೆ.

ಮೃತ ಗಣೇಶ್ ಹೊಸ ಮನೆ ಕಟ್ಟುತ್ತಿದ್ದು ಮನೆ ಸಮೀಪದಲ್ಲೇ ಪುಟ್ಟ ಗುಡಿಸಲಿನಲ್ಲಿ ಪತ್ನಿ ಜೊತೆ ವಾಸಿಸುತ್ತಿದ್ದರು. ಇವರ ಪತ್ನಿ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದರಿಂದ ಮನೆಯಲ್ಲಿ ಮತ್ಯಾರು ಇದ್ದಿರಲಿಲ್ಲ. ದಟ್ಟ ಹೊಗೆಯನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಮನೆಗೆ ತಗುಲಿದ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದರೂ ಗಣೇಶ ಖಾರ್ವಿ ಮನೆಯ ಒಳಗೆ ಇರುವುದು ಆರಂಭದಲ್ಲಿ ಯಾರಿಗೂ ತಿಳಿದಿರಲಿಲ್ಲ. ಬಳಿಕ ಸ್ಥಳೀಯರು ಮನೆಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಪಿಎಸ್ಐ ನಂಜಾ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply