ನಿವೃತ್ತ ಪೊಲೀಸರ ಆರೋಗ್ಯ ಯೋಜನೆ ಸಪರ್ಮಕವಾಗಿ ಜಾರಿಯಾಗಲಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ,ಏ03:
ನಿವೃತ್ತ ಪೊಲೀಸರಿಗೆ ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯು ಇನ್ನಷ್ಟು ಪರಿಣಾಮಕಾರಿಯಾಗಿ, ಸಮರ್ಪಕವಾಗಿ ಜಾರಿಗೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿ.ಎಸ್.ಪಿ ನಿವೃತ್ತ ಸಹಾಯಕ ಪೊಲೀಸ್ ಉಪನಿರೀಕ್ಷಕ ಮ್ಯಾಥ್ಯೂ ಅರ್ಚಿಬಾಲ್ ಡಿ ಸೋಜಾ ಹೇಳಿದರು.

Call us

Click Here

ಅವರು ಶನಿವಾರ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಉಡುಪಿಯ ಪೊಲೀಸ್ ಕವಾಯತು ಮೈದಾನ (ಚಂದು ಮೈದಾನ) ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ನಿವೃತ್ತ ಪೊಲೀಸರಿಗೆ ಒದಗಿಸಿರುವ ಆರೋಗ್ಯ ಭಾಗ್ಯ ಯೋಜನೆಯನ್ನು ನಿರ್ದಿಷ್ಟ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಜಾರಿಗೊಳಿಸಿದ್ದು, ಚಿಕಿತ್ಸೆ ನೀಡುವ ಅಸ್ಪತ್ರೆಗಳ ಸಂಖ್ಯೆಯನ್ನು ವಿಸ್ತರಿಸಬೇಕು ಅಲ್ಲದೇ ಚಿಕಿತ್ಸಾ ವೆಚ್ಚವನ್ನು 1 ಲಕ್ಷ ರೂಗಳಿಗೆ ಮಾತ್ರ ಸೀಮಿತಗೊಳಿಸಿದ್ದು, ಇದನ್ನು ಹೆಚ್ಚುಗೊಳಿಸಬೇಕು , ಪೊಲೀಸ್ ಅಧಿಕಾರಿ ಮತ್ತುಸಿಬ್ಬಂದಿಗಳು ಯಾವುದೇ ದುಶ್ಚಟಗಳಿಗೆ ಒಳಗಾಗದೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಂಡು, ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪೊಲೀಸ್ ಧ್ವಜ ಬಿಡುಗಡೆ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕ್ಷೇಮ ನಿಧಿಯ ಚೆಕ್ ಗಳನ್ನು ವಿತರಿಸಲಾಯಿತು. ಆಕರ್ಷಕ ಪಥ ಸಂಚಲನ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ವಾಗತಿಸಿದರು, ಉಡುಪಿ ಸೆನ್ ಪೊಲೀಶ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ನಿರೂಪಿಸಿದರು, ಎಎಸ್ಪಿ ಸಿದ್ದಲಿಂಗಪ್ಪ ವಂದಿಸಿದರು.

Click here

Click here

Click here

Click Here

Call us

Call us

Leave a Reply