ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪ್ರಗ್ನ್ಯಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಸಂಸ್ಥೆಯ ಆಡಳಿತದೊಂದಿಗೆ ತಾಲೂಕಿನ ಉಪ್ಪುಂದದಲ್ಲಿ ‘ನಂದನವನ ಹಾಸ್ಪಿಟಾಲಿಟಿ & ಸರ್ವಿಸಸ್’ (ರೆಸ್ಟೋರೆಂಟ್, ಲಾಡ್ಜಿಂಗ್ & ಆಡಿಟೋರಿಯಂ) ಸಂಸ್ಥೆಯ ಪುನರಾರಂಭ ಕಾರ್ಯಕ್ರಮದಲ್ಲಿ ಸೋಮವಾರ ಜರುಗಿತು.
ನವೀಕೃತ ಉದ್ಯಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಸಚಿವಎಸ್.ಟಿ. ಸೋಮಶೇಖರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮುರುಗೇಶ್ ನಿರಾಣಿ, ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಸಹಕಾರಿ ಧುರೀಣರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು ಶುಭಕೋರಿದರು.
ಪ್ರಗ್ನ್ಯಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಗೋವಿಂದ ಬಾಬು ಪೂಜಾರಿ ಅವರು ಅತಿಥಿಗಳನ್ನು ಸ್ವಾಗತಿಸಿದರು. ಈ ಸಂದರ್ಭ ಬಿ. ಎಸ್. ಸುರೇಶ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ, ಗಿರೀಶ್ ಬೈಂದೂರು, ಗುರುರಾಜ್ ಪಂಜು ಪೂಜಾರಿ, ಸುಧಾಕರ ಆರ್. ಪೂಜಾರಿ, ಬಿಜೂರು ಜಯರಾಮ ಶೆಟ್ಟಿ, ನಾಗರಾಜ ಪಿ. ಯಡ್ತರೆ ಮೊದಲಾದವರು ಉಪಸ್ಥಿತರಿದ್ದರು.