ಎ.6-10: ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಪದ್ಮಾವತಿ ಅಮ್ಮನವರ ದೇಗುಲದಲ್ಲಿ ಪಂಚಕಲ್ಯಾಣ ಮಹೋತ್ಸವ, ರಥೋತ್ಸವ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಕಾಲ್ತೋಡು ಗ್ರಾಮ ಶ್ರೀ ಕ್ಷೇತ್ರ ಬೊಳಂಬಳ್ಳಿ ಶ್ರೀ ಪಾರ್ಶ್ವನಾಥ ಸ್ವಾಮಿ, ಆಳುಪ ರಾಜ ಮನೆತನದ ದೇವಿ ಮಹಾಮಾತೆ ಪದ್ಮಾವತಿ ಅಮ್ಮನವರ ದೇವಸ್ಥಾನ ಬಸದಿಯ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ, ನೂತನ ಶಿಲಾಮಯ ಮಾನಸ್ತಂಭ ಪ್ರತಿಷ್ಠಾಪನೆ, ಶ್ರೀ ಪದ್ಮಾವತಿ ಅಮ್ಮನವರ ಬಸದಿಯ ನೂತನ ರಥೋತ್ಸವ ಮಹೋತ್ಸವವು ಎಪ್ರಿಲ್ 6 ರಿಂದ 10ನೇ ತಾರೀಕಿನ ತನಕ ಜರುಗಲಿದೆ.

Call us

Click Here

ಮೂಡಬಿದ್ರೆ ಜೈನಮಠ ಚಾರುಕೀರ್ತಿ ಭಟ್ಟಾರಕರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಹೊಂಬುಜ ಜೈನ ಮಠ ದೇವೇಂದ್ರಕೀರ್ತಿ ಭಟ್ಟಾರಕ ಹಾಗೂ ಸೋಂದೆ ಮಠ ಭಟ್ಟಾಕಳಂಕ ಸ್ವಾಮೀಜಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದೊಂದಿಗೆ ಜರುಗುವ ಕಾರ್ಯಕ್ರಮದಲ್ಲಿ ಪ್ರತಿದಿನ ಬೆಳಗ್ಗಿನಿಂದ ರಾತ್ರಿಯವರೆಗೆ ದೇವಪೂಜಾ ಕಾರ್ಯಗಳು, ಮಹಾಮಾತೆ ಪದ್ಮಾವತಿಯ ಆರಾಧನೆ, ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮಗಳು, ರಾತ್ರಿ 8 ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಯಕ್ಷಗಾನ ಜೋಡಾಟ, ನಾಟಕಗಳು, ಮನುಹಂದಾಡಿ ಅವರಿಂದ ಹಾಸ್ಯಸಂಜೆ, ಮಹೇಶ ಹರಪನಹಳ್ಳಿ ಬಳಗದವರಿಂದ ಸಂಗೀತ ರಸಮಂಜರಿ, ಗಂಗೊಳ್ಳಿ ಜೂನಿಯರ್ ಗುರುಕಿರಣ್ ರವರಿಂದ ನೃತ್ಯ ಸಂಗೀತ, ಹಾಗೂ ಹಗಲಿನಲ್ಲಿ ಧಾರ್ಮಿಕ ಸಭಾಕಾರ್ಯಕ್ರಮಗಳು ಜರುಗಲಿವೆ.

ಎಪ್ರಿಲ್ 6ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಭಗವಾನ್ 1008 ಶ್ರೀ ಪಾರ್ಶ್ವನಾಥ ತೀರ್ಥಂಕರರ ಜಿನಬಿಂಬದ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ, ಎಪ್ರಿಲ್ 10 ರಂದು ರಥೋತ್ಸವ ಜರುಗಲಿದೆ. ಭಕ್ತರಿಗಾಗಿ ಎಲ್ಲಾ ಐದು ದಿನಗಳು ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ, ಬೆಳಿಗ್ಗೆ ಮತ್ತು ರಾತ್ರಿಯಲ್ಲಿ ಉಪಹಾರದ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದದ ಡಿ ಸುರೇಂದ್ರ ಹೆಗ್ಗಡೆ ಅವರು, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ ರಾಘವೇಂದ್ರ, ಸಹಕಾರಿ ಧುರೀಣ ಡಾ. ಎಂ ಎನ್ ರಾಜೇಂದ್ರ ಕುಮಾರ್, ಧರ್ಮಸ್ಥಳದ ಹರ್ಷೇಂದ್ರ ಕುಮಾರ್, ಮಾಜಿ ಶಾಸಕರುಗಳಾದ ಬಸ್ರೂರು ಅಪ್ಪಣ್ಣ ಹೆಗ್ಗಡೆ, ಗೋಪಾಲ ಪೂಜಾರಿ, ರಾಜಶೇಖರ್ ಹೆಬ್ಬಾರ್, ಪೃಥ್ವಿರಾಜ್ ಜೈನ್ ಹಾಗೂ ಸಮಾಜದ ಇನ್ನಿತರ ಗಣ್ಯರು ಭಾಗವಹಿಸಲಿರುವರು.

ಪ್ರತಿ 12 ವರ್ಷಗಳಿಗೊಮ್ಮೆ ಜರಗುವ ಈ ಪುಣ್ಯ ಕಾರ್ಯದಲ್ಲಿ ಸಾರ್ವಜನಿಕರು ಭಾಗವಹಿಸಿ ಶ್ರೀದೇವಿ ಮಹಾಮಾತೆ ಪದ್ಮಾವತಿಯ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್, ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ಆಕಾಶರಾಜ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Click here

Click here

Click Here

Call us

Call us

Leave a Reply