ಪ.ಪಂಗಡದವರಿಗೆ ಉಚಿತ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಏ.8:
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದವರಿಗೆ ಬೆಂಗಳೂರು ದಾಸನಪುರ ಹೋಬಳಿಯ ವಡ್ಡರಹಳ್ಳಿ ಬೆಂ.ಮ.ಸಾ.ಸಂ. ತರಬೇತಿ ಕೇಂದ್ರದಲ್ಲಿ 30 ದಿನಗಳ ವಸತಿ ಸೌಲಭ್ಯದೊಂದಿಗೆ ಉಚಿತ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ ಜೊತೆಗೆ ಚಾಲನಾ ಪರವಾನಗಿ ನೀಡುವ ಸಲುವಾಗಿ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಲಘು ವಾಹನ ತರಬೇತಿಗೆ ಕನಿಷ್ಠ 18 ವರ್ಷ, ಭಾರಿ ವಾಹನ ತರಬೇತಿಗೆ ಕನಿಷ್ಠ 20 ವರ್ಷ ಮೇಲ್ಪಟ್ಟ ಹಾಗೂ ಲಘು ವಾಹನ ಚಾಲನಾ ಅನುಜ್ಞಾಪತ್ರ ಹೊಂದಿರುವ ಅರ್ಹ ಫಲಾನುಭವಿಗಳು ಏಪ್ರಿಲ್ 20 ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kmvstdcl.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಬಿ ಬ್ಲಾಕ್, ರಜತಾದ್ರಿ ಮಣಿಪಾಲ ಕಚೇರಿಯನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply