ಉಪ್ಪುಂದ ಸ.ಮಾ.ಪ್ರಾ ಶಾಲೆ: ಹಳೆವಿದ್ಯಾರ್ಥಿಗಳ ನೆರವಿನಿಂದ ನಿರ್ಮಾಣಗೊಂಡ 5 ತರಗತಿ ಕೋಣೆ ಲೋಕಾರ್ಪಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಇದ್ದರೆ ಶೈಕ್ಷಣಿಕ ಬದಲಾವಣೆಗಳನ್ನು ತರಬಹುದು. ಇತ್ತೀಚಿನ ವರ್ಷಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನೀಡುತ್ತಿರುವುದು ಕೂಡ ಒಂದು ರೀತಿಯ ಶೈಕ್ಷಣಿಕ ಕ್ರಾಂತಿಯಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Click Here

ಉಪ್ಪುಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಳೆವಿದ್ಯಾರ್ಥಿಗಳ ನೆರವಿನಿಂದ ನಿರ್ಮಾಣಗೊಂಡ ಐದು ತರಗತಿ ಕೋಣೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸುಮಾರು 140 ವರ್ಷಗಳ ಇತಿಹಾಸ ಹೊಂದಿರುವ ಉಪ್ಪುಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಣ ಪಡೆದ ಹಳೆ ವಿದ್ಯಾರ್ಥಿಗಳು ಒಂದು ಸಮಿತಿ ರಚಿಸಿ ಸುಸಜ್ಜಿತ ಐದು ತರಗತಿ ಕಟ್ಟಡಗಳನ್ನು ನಿರ್ಮಿಸಿ ಶಾಲೆಗೆ ಹಸ್ತಾಂತರಿಸಿದ್ದು ಒಂದು ಇತಿಹಾಸವಾಗಿದೆ. ಹೀಗೆಯೇ ಇತರ ಎಲ್ಲಾ ಶಾಲೆಗಳಲ್ಲಿಯೂ ಕೂಡ ಪೋಷಕರು, ಹಳೆವಿದ್ಯಾರ್ಥಿಗಳು ಶಾಲಾ ಎಸ್‌ಡಿಎಂಸಿಯೊಂದಿಗೆ ಕೈಜೋಡಿಸುವ ಮೂಲಕ ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಹೊದುವಂತಾಗಲಿ ಎಂದು ಹಾರೈಸಿದರು.

ಎಸ್‌ಡಿಎಂಸಿ ಅಧ್ಯಕ್ಷ ಉದಯ್ ಎಸ್. ಪಡಿಯಾರ್ ಅಧ್ಯಕ್ಷತೆವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಲಕ್ಷ್ಮೀ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಸಹಾಯವಿತ್ತ 200ಕ್ಕೂ ಹೆಚ್ಚು ಹಳೆವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಒಂದು ಕೊಠಡಿಯ ಸಂಪೂರ್ಣ ವೆಚ್ಚ ಭರಿಸಿದ ಉಪ್ಪುಂದ ಶಾಂತಾ ರಾಮಕೃಷ್ಣ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ ಯು. ಅಶೋಕ ಭಟ್ ಬೆಂಗಳೂರು ಇವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಬೆಂಗಳೂರಿನ ಬ್ರ್ಯಾಡಿ ಕಂಪೆನಿಯವರು ರೂ. ೪ಲಕ್ಷ ವೆಚ್ಚದ ಸ್ಟೀಮ್ ಬಾಯ್ಲರ್ ಮತ್ತು ಕೈ ತೋಳೆಯುವ ಘಟಕವನ್ನು ಶಾಲೆಗೆ ಹಸ್ತಾಂತರಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಂ. ಮುಂದಿನಮನಿ, ತಾಪಂ ಮಾಜಿ ಸದಸ್ಯೆ ಪ್ರಮೀಳಾ ದೇವಾಡಿಗ, ಕರ್ನಾಟಕ ಬ್ಯಾಂಕಿನ ನಿವೃತ್ತ ಜನರಲ್ ಮೆನೇಜರ್ ಯು. ಸುಭಾಶ್ಚಂದ್ರ ಪುರಾಣಿಕ, ನಿವೃತ್ತ ಅಧಿಕಾರಿ ಶಿವಾನಂದ ಮಯ್ಯ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕ ಮೋಹನ ಪೂಜಾರಿ, ಸಂಘದ ನಿವೃತ್ತ ಸಿಇಒ ಗಣಪಯ್ಯ ಗಾಣಿಗ, ಡಾ. ದಿನೇಶ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯು. ಎಚ್. ರಾಜಾರಾಮ ಭಟ್, ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಪ್ರಭಾವತಿ ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ವೆಂಕಪ್ಪ ಉಪ್ಪಾರ್ ಸ್ವಾಗತಿಸಿದರು. ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಶ್ರೀನಿವಾಸ ಉಬ್ಜೇರಿ ಪ್ರಾಸ್ತಾವಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿ, ಪ್ರಸನ್ನ ಕುಮಾರ್ ವಂದಿಸಿದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತು.

Leave a Reply