ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಆಳ್ವಾಸ್‍ನ 71 ವಿದ್ಯಾರ್ಥಿಗಳು ಆಯ್ಕೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಮೂಡುಬಿದಿರೆ:
ಬೆಂಗಳೂರಿನ ಜೈನ್ ಯೂನಿವರ್ಸಿಟಿ ಆಶ್ರಯದಲ್ಲಿ ಏ. 24 ರಿಂದ ಮೇ 3ರವರೆಗೆ ನಡೆಯಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 71 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದ್ದಾರೆ.

Call us

Click Here

ಈ ಬಾರಿಯ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರೀಡಾಕೂಟಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಸಾಧನೆ ಮೆರೆದ ಕ್ರೀಡಾಪಟುಗಳು ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ಒಟ್ಟು 41 ವಿದ್ಯಾರ್ಥಿಗಳು, ಮಹಿಳಾ ಕಬಡ್ಡಿಯಲ್ಲಿ 9 ವಿದ್ಯಾರ್ಥಿಗಳು, ಪುರುಷರ ವಾಲಿಬಾಲ್‍ನಲ್ಲಿ 7 ವಿದ್ಯಾರ್ಥಿಗಳು, ಮಹಿಳೆಯರ ಹಾಕಿಯಲ್ಲಿ 3, ಮಹಿಳೆಯರ ವೈಟ್ ಲಿಫ್ಟಿಂಗ್ ನಲ್ಲಿ 3 ಮಂದಿ, ಮಹಿಳೆಯರ ಕುಸ್ತಿಯಲ್ಲಿ 2 ಹಾಗೂ 6 ಮಂದಿ ಮಲ್ಲಕಂಬ ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವ ವಿದ್ಯಾಲಯವನ್ನು ಪ್ರತಿನಿಧಿಸಲಿದ್ದು, ಇವರೆಲ್ಲರೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ಮೊದಲನೇ ಆವೃತ್ತಿಯ ಖೇಲೋ ಇಂಡಿಯಾದಲ್ಲಿ ಆಳ್ವಾಸ್ ಸಾಧನೆ:
ಕಳೆದ ಬಾರಿ ಒರಿಸ್ಸಾದ ಕಳಿಂಗ ವಿವಿಯಲ್ಲಿ ನಡೆದ ಮೊದಲನೇ ಆವೃತ್ತಿಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪುರುಷರ ಹಾಗೂ ಮಹಿಳೆಯರ ವಿಭಾಗದ ಎರಡೂ ತಂಡ ಪ್ರಶಸ್ತಿಯನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಈ ಕ್ರೀಡಾಕೂಟದಲ್ಲಿ ಒಟ್ಟು 7 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕದೊಂದಿಗೆ ಒಟ್ಟು 18 ಪದಕಗಳನ್ನು ಮಂಗಳೂರು ವಿಶ್ವವಿದ್ಯಾಲಯ ಪಡೆದಿದ್ದು, ಈ ಎಲ್ಲಾ ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದರು. ಇದೇ ಕ್ರೀಡಾಕೂಟದ ವೈಟ್ ಲಿಫ್ಟಿಂಗ್ ವಿಭಾಗದಲ್ಲೂ 2 ಚಿನ್ನ, 1 ಬೆಳ್ಳಿ ಹಾಗೂ 1 ಕಂಚಿನ ಪದಕದೊಂದಿಗೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಒಟ್ಟು 4 ಪದಕಗಳನ್ನು ಪಡೆದಿದ್ದರು.

ಮಲ್ಲಕಂಬದಲ್ಲಿ ಆಳ್ವಾಸ್‍ನ ವಿಧ್ಯಾರ್ಥಿಗಳ ಛಾಪು:
ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೊಸದಾಗಿ ಸೇರ್ಪಡೆಗೊಂಡ ದೇಶಿಯ ಕ್ರೀಡೆಯಲ್ಲೊಂದಾಗಿರುವ ಮಲ್ಲಕಂಬ ಕ್ರೀಡೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯದಿಂದ ಆಯ್ಕೆಯಾದ ಏಕೈಕ ವಿಶ್ವವಿದ್ಯಾಲಯವಾಗಿದ್ದು, ಈ ತಂಡವನ್ನು ಪ್ರತಿನಿಧಿಸಲಿರುವ ಎಲ್ಲಾ ಆರು ಮಂದಿ ಕ್ರೀಡಾಪಟುಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಎನ್ನುವುದು ಗಮನಾರ್ಹ.

ಆಳ್ವಾಸ್‍ನ ಉಚಿತ ಶಿಕ್ಷಣದ ಫಲಾನುಭವಿಗಳು:
ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿರುವ ಎಲ್ಲಾ 71 ಕ್ರೀಡಾಪಟುಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಡಿ, ಉಚಿತ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.

Click here

Click here

Click here

Click Here

Call us

Call us

ಕಳೆದ ಬಾರಿ ಮೊದಲನೇ ಆವೃತ್ತಿಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಒಟ್ಟಾಗಿ 5ನೇ ಸ್ಥಾನವನ್ನು ಪಡೆದಿತ್ತು.

Leave a Reply