ಆನೆಗುಡ್ಡೆಯಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಳದಲ್ಲಿ ಜರುಗಿದವು. ಲೋಕಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗ, ಅನ್ನಸಂತರ್ಪಣೆ, ರಾತ್ರಿ ಸುವರ್ಣಪಾಲಿಕೆ, ರಜತ ರಥ, ರಂಗಪೂಜಾ ಧಾರ್ಮಿಕ ಕಾರ‍್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ‍್ಯಕ್ರಮದ ಅಂಗವಾಗಿ ಸಾಲಿಗ್ರಾಮ ಮಕ್ಕಳ ಮೇಳದವರಿಂದ ವೀರ ವೃಷಸೇನ ಯಕ್ಷಗಾನ ಪ್ರದರ್ಶನಗೊಂಡಿತ್ತು.

Call us

Click Here

ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ದೇವಳದ ಸಿಬ್ಬಂದಿ ಮತ್ತು ಅರ್ಚಕ ವರ್ಗದವರು ಉಪಸ್ಥಿತರಿದ್ದರು.

Leave a Reply