ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಂಗಳೂರು ವಿ.ವಿ.ಯ 2020-21ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಬಿ.ಸಿ.ಎ. ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಸುಮಧುರ ಶೆಟ್ಟಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರರು ಅಭಿನಂದನೆ ಸಲ್ಲಿಸಿದ್ದಾರೆ.