ಪಶುವೈದ್ಯಾಧಿಕಾರಿ ಡಾ. ಅರುಣ್ ಕುಮಾರ್ ಶೆಟ್ಟಿ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಎ.22:
ಬ್ರಹ್ಮಾವರ ಪಶುವೈದ್ಯಕೀಯ ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ. ಅವರು ಕುಮಾರ್ ಶೆಟ್ಟಿ ಎನ್. ಅವರು ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದು, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Call us

Click Here

ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸೇವೆಗೈದ ರಾಜ್ಯ ಸರಕಾರಿ ನೌಕರರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಲು ಸರಕಾರ ಆದೇಶಿಸಿದ್ದು, ಅದರಂತೆ ಡಾ. ಅರುಣ್ ಕುಮಾರ್ ಶೆಟ್ಟಿ ಅವರ ಗುಣಮಟ್ಟದ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ಡಾ. ಅರುಣ್ ಕುಮಾರ್ ಶೆಟ್ಟಿಯವರು ಗುಲ್ವಾಡಿ ಗ್ರಾಮದ ಕರ್ಕಿಯವರಾಗಿದ್ದು, ಪಶುವೈದ್ಯಕೀಯ ವಿಜ್ಞಾನದಲ್ಲಿ ಪದವಿ ಪಡೆದು ವಂಡ್ಸೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಸೇವೆ ಆರಂಭಿಸಿದವರು. ಬಳಿಕ ವಿವಿಧೆಡೆ ಸೇವೆ ಸಲ್ಲಿಸಿ ಕೋಟ ಆಸ್ಪತ್ರೆಗೆ ಮುಖ್ಯ ಪಶುವೈದ್ಯಾಧಿಕಾರಿಯಾಗಿ ಭಡ್ತಿ ಪಡೆದರು. ಪ್ರಸ್ತುತ ಬ್ರಹ್ಮಾವರ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಆಗಿ ಮುಂಭಡ್ತಿ ಹೊಂದಿ ಸೇವೆ ಸಲ್ಲಿಸುತ್ತಿದ್ದು, ಸತತ 20 ವರ್ಷಗಳಿಂದ ಸರಕಾರಿ ಸೇವೆಯಲ್ಲಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಹಾಗೂ 2021 & 22 ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಉಡುಪಿ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್ ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಹೆಬ್ರಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಕಾಪು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ, ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹಣ್ಯ ಶೇರಿಗಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ವೀಣಾ ಸ್ವಾಗತಿಸಿದರು, ಜಿಲ್ಲಾ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕಿರಣ್ ಹೆಗ್ಡೆ ವಂದಿಸಿದರು. ಉಪಾಧ್ಯಕ್ಷ ಪ್ರಶಾಂತ್ ಹಾವಂಜೆ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply