ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಯಾರೀಸ್ ವಿದ್ಯಾ ಸಂಸ್ಥೆಗಳು ಕೋಡಿ , ಕುಂದಾಪುರ, ಇವರು ಆಯೋಜಿಸಿ ಪ್ರತಿ ತಿಂಗಳ ಕೊನೆಯ ರವಿವಾರ ನಡೆಸುತ್ತಿರುವ “ಸ್ವಚ್ಛ ಕಡಲ ತೀರ -ಹಸಿರು ಕೋಡಿ” ಅಭಿಯಾನದ 4ನೇ ಹಂತ ನೆರೆವೇರಿತು. ವಿಶ್ವ ಭೂ ದಿನಾಚರಣೆಯಂದು ನಡೆಯುತ್ತಿರುವ
ಈ ಪರಿಸರ ಸಂರಕ್ಷಣೆಯ ಕಾರ್ಯಕ್ಕೆ ಹೊಸ ಮೆರುಗನ್ನು ಕೊಟ್ಟಿದೆ ಮತ್ತ್ತು ಸಾರ್ಥಕ ಭಾವ ತುಂಬಿದೆ ಎಂದು ಸಯ್ಯದ್ ಮಹಮ್ಮದ್ ಬ್ಯಾರಿ ಯವರು ಸಂತೋಷ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿಗಳು, ಶಿಕ್ಷಕರು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ- ಶಿಕ್ಷಕ ಸಂಘದ ಸದಸ್ಯರು, ಪೋಷಕರು, ಪ್ರಾಕ್ತನ ವಿದ್ಯಾರ್ಥಿಗಳು, ಊರಿನ ಪ್ರಮುಖರು ಹಾಗೂ ಮಹಾಜನರು ಮತ್ತು ನಿಸರ್ಗ ಪ್ರಿಯರು ಈ ಅಭಿಯಾನದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಕೋಡಿಯ ಕಡಲ ತೀರವನ್ನು ಸ್ವಚ್ಛಗೊಳಿಸಿದರು. ಈ ಕಾರ್ಯದಲ್ಲಿ ನಮಗೆ ಸಹಕಾರವನ್ನು ನೀಡುತ್ತಿರುವ ಕುಂದಾಪುರ ಪುರಸಭೆಯ ಚೀಫ್ ಆಫೀಸರ್ ಹಾಗೂ ಪದಾಧಿಕಾರಿಗಳಿಗೆ ಮತ್ತು ಎಲ್ಲಾ ಸಿಬ್ಬಂದಿವರ್ಗದವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಬ್ಯಾರೀಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷರಾದ ಹಾಜಿ ಕೆ ಎಂ ಅಬ್ದುಲ್ ರೆಹಮಾನ್ ತಿಳಿಸಿದ್ದಾರೆ.