ಅಂಗಳದಲ್ಲಿ ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕಿಗೆ ಕಾರು ಡಿಕ್ಕಿಯಾಗಿ ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಮನೆಯ ಅಂಗಳದಲ್ಲಿ ಜೋಕಾಲಿ ಕಟ್ಟಿ ಆಟವಾಡುತ್ತಿದ್ದ ಬಾಲಕಿಗೆ, ಕಾರು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು, ಮೃತಪಟ್ಟ ಘಟನೆಯೊಂದು ತಾಲೂಕಿನ ಬೀಜಾಡಿ ಗ್ರಾಮದಲ್ಲಿ ನಡೆದಿದೆ. ಪ್ರಾಧನ್ಯ (09) ಮೃತ ದುರ್ದೈವಿ.

Call us

Click Here

ಶಾಲೆಗೆ ರಜೆ ಇದ್ದುದರಿಂದ ಬಾಲಕಿ ಪ್ರಾದಾನ್ಯ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಎದುರುಗಡೆ ಮರಕ್ಕೆ ಸೀರೆಯಿಂದ ಜೋಕಾಲಿ ಕಟ್ಟಿ ಕುಳಿತು ಆಟ ಆಡುತ್ತಿದ್ದ ಸಂದರ್ಭ, ಮನೆಯ ಸನಿಹದಲ್ಲಿ ನಿಲ್ಲಿಸಿದ್ದ ಕಾರನ್ನು ಸಂಬಂಧಿ ಸಂತೋಷ ಎಂಬಾತ ನಿರ್ಲಕ್ಷ್ಯತನದಿಂದ ಚಲಾಯಿಸಿದ್ದರಿಂದ ಜೋಕಾಲಿ ಆಡುತ್ತಿದ್ದ ಪ್ರಾದಾನ್ಯಳಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಆಕೆಯು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದಾಗ ಮೃತಪಟ್ಟಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply