ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಏ.27:
ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದುರ ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

Call us

Click Here

ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ದೇವಸ್ಥಾನದ ಅಭಿವೃಧ್ದಿ ಕಾರ್ಯಗಳ ಬಗ್ಗೆ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಕಾಂಬಿಕಾ ದೇವಸ್ಥಾನ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ, ಏಪ್ರಿಲ್, ಮೇ, ಜೂನ್ ತಿಂಗಳ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾÀಗದAತೆ ನೋಡಿಕೊಳ್ಳಬೇಕು, ಕುಡಿಯುವ ನೀರಿನ ಸಮಸ್ಯೆಗಳ ಪರಿಹರಕ್ಕೆ ಪ್ರತ್ಯೇಕ ಸಹಾಯವಾಣಿ ತರೆದು,ಸಮಸ್ಯೆಗಳನ್ನು ಕೂಡÀಲೇ ಬಗೆಹರಿಸಬೇಕು , ಈಗಾಗಲೇ ಕುಡಿಯುವ ನೀರು ಮತ್ತು ಒಳಚರÀಂಡಿ ಮಂಡಳಿ ವತಿಯಿಂದÀ ಕೈಗೊಂಡಿರುವ ನೀರು ಸರಬರಾಜು ಘಟಕದ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ದೇವಸ್ಥಾನದ ಹಾಗೂ ಸ್ಥಳಿಯ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಕೈಗೊಳ್ಳುವಂತೆ ತಿಳಿಸಿದರು.

ಕೊಲ್ಲೂರು ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಗಳು ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, 334 ಕಟ್ಟಡಗಳಿಗೆ ಸಂಪರ್ಕ ನೀಡಲಾಗಿದೆ ಬಾಕಿ ಉಳಿದ ಕಟ್ಟಗಳಗಳಿಗೂ,ಶೀಘ್ರದಲ್ಲಿ ಯುಜಿಡಿ ಸಂಪರ್ಕವನ್ನು ಕಲ್ಪಿಸಿ , ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿನ ತ್ಯಾಜ್ಯ ನೀರು, ಸೌಪರ್ಣಿಕ ನದಿಯನ್ನು ಸೇರಿ ಕಲುಷಿತವಾಗದಂತೆ ನೋಡಿಕೊಳ್ಳಬೇಕು ಎಂದರು.

ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಸಲಾಗಿದೆ ಅಲ್ಲದೇ ಸ್ಥಳೀಯ ರೈತರು ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದಾರೆ ಆದರೆ ಅವುಗಳ ಚಾಲನೆಗೆ ಅಗತ್ಯವಿರುವ ವಿದ್ಯ್ಯತ್ ವೋಲ್ಟೇಜ್ ನ ಸಮಸ್ಯೆ ಇದೆ ಅದನ್ನು ಶೀಘ್ರದಲ್ಲಿಯೇ ಬಗಹರಿಸಬೇಕು. ಈಗಾಗಲೇ ಹೊಸ ಸಬ್ ಸ್ಠೇಶನ್ ನಿರ್ಮಾಣಕ್ಕೆ ಜಾಗವನ್ನೂ ಸಹ ನೀಡಲಾಗಿದೆ. ಈ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿ ಪಡೆದು ಶೀಘ್ರದಲ್ಲಿ ಆರಂಭಿಸಬೇಕು ಎಂದರು.

ಕೊಲ್ಲೂರು ನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಬೇಕು, ಇದಕ್ಕಾಗಿ ದೇವಸ್ಥಾನ ವತಿಯಿಂದ ಮಹಿಳಾ ಮಂಡಳಿಗಳಿಗೆ ಅಗತ್ಯ ತರಬೇತಿ ನೀಡಿ, ಬಟ್ಟೆಯ ಬ್ಯಾಗ್ ಗಳನ್ನು ತಯಾರಿಸಿ, ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

Click here

Click here

Click here

Click Here

Call us

Call us

ಕೊಲ್ಲೂರು ದೇವಸ್ಥಾನದ ವತಿಯಿಂದ ಗೋಶಾಲೆ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯನ್ನು ಗುರುತಿಸಲಾಗಿದೆ, ಅದನ್ನು ಶೀಘ್ರದಲ್ಲಿಯೇ ವ್ಯವಸ್ಥಾಪನಾ ಸಮಿತಿಗೆ ನೀಡಲಾಗುವುದು , ಅರಣ್ಯ ಇಲಾಖೆ ವತಿಯಿಂದ ಟ್ರೀಪಾರ್ಕ್, ದೇವಸ್ಥಾನ ವತಿಯಿಂದ ಉದ್ಯಾನವನ ಮೂಸಿಯಂ ನಿರ್ಮಾಣಕ್ಕೆ ಮುಂದಾಗಬೇಕು ಎಂದು ದೇವಾಲಯದ ಸಿಇಓ ಗೆ ಸೂಚನೆ ನೀಡಿದರು.

ಕೊಲ್ಲೂರು ದೇವಾಲಯದ ವತಿಯಿಂದ ನಡೆಸುತ್ತಿರುವ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ದೆಹಲಿ ಮಾದರಿಯನ್ನು ಅನುಸರಿಸುವಂತೆ ತಿಳಿಸಿದ ಜಿಲ್ಲಾಧಿಕರಿಗಳು, ದೆಹಲಿಗೆ ತೆರಳಿ ಈ ಬಗ್ಗೆ ಅಧ್ಯಯನ ಮಾಡಿ ಬರುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್ ಮಾತನಾಡಿ, ಕೊಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ವೈಜ್ಷಾನಿಕವಾಗಿ ವಿಲೇವಾರಿ ಮಾಡಬೇಕು, ಪಂಚಾಯತ್ ವತಿಯಿಂದ ತ್ಯಾಜ್ಯದಿಂದ ಬಯೋಗ್ಯಾಸ್ ಘಟಕ ಸ್ಥಾಪನೆಗೆ ಮುಂದಾಗಬೇಕು , ಇಲ್ಲಿ ಉತ್ಪಾದಿಸುವ ಗ್ಯಾಸ್ ನ್ನು ಸ್ಥಳೀಯ ಹಾಸ್ಟೆಲ್ ಗಳಿಗೆ ನೀಡಬೇಕು ಎಂದರು.

ಸಭೆಯಲ್ಲಿ ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಭಟ್, ಸ್ಥಳೀಯ ಸಮಸ್ಯೆಗಳ ಬಗ್ಗೆ ಸಮಿತಿಯ ಗಮನಕ್ಕೆ ತಂದರು.

ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜಯಾನಂದ ಹೋಬಳಿದಾರ್, ರತ್ನ ರಮೇಶ್, ವಿವಿಧ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

One thought on “ಕೊಲ್ಲೂರು ದೇವಸ್ಥಾನ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಮೂಲಸೌಕರ್ಯಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ

  1. I am seeing Kollur temple from decades, just see the new dining hall built with so much space and expenses, only 4 peoples are serving for nearly thousands of devotees on que.

    Why they cant put atleast 10 peoples to serve the buffet in three rows.

    Forget Darmasthala, atleast follow some expamples of Mandarthi or Anegudde..
    Whoever trustee comes no use, everyone is intrested in Money making from the God and public money.. But whether God will spare them, I hope no because already it is seen that whoever the trustees will become Fopper after his terms of service at Kollur due to the curse..

Leave a Reply